ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 18 DECEMBER 2024
ಸಾಗರ : ಸಿಗಂದೂರು ಸೇತುವೆ (Bridge) ಕಾಮಗಾರಿಯ ಫೋಟೊವೊಂದನ್ನು ಸಂಸದ ಬಿ.ವೈ.ರಾಘವೇಂದ್ರ ತಮ್ಮ ಫೇಸ್ಬುಕ್ನಲ್ಲಿ ಷೇರ್ ಮಾಡಿಕೊಂಡಿದ್ದಾರೆ. ಈ ಫೋಟೊ ವೈರಲ್ ಆಗಿದೆ.
ಸಿಗಂದೂರು ಸೇತುವೆ ಕಾಮಗಾರಿ ಬಹತೇಕ ಪೂರ್ಣಗೊಂಡಿದೆ. ಸೇತುವೆ ಸಂಪೂರ್ಣ ಉದ್ದದ ಡ್ರೋಣ್ ಫೋಟೊವೊಂದನ್ನು ಸಂಸದ ಬಿ.ವೈ.ರಾಘವೇಂದ್ರ ತಮ್ಮ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೊಗೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
2025ರ ಏಪ್ರಿಲ್ನಲ್ಲಿ ಉದ್ಘಾಟನೆ
ಈಚೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಅವರು ಕುಟುಂಬ ಸಹಿತ ಸಿಗಂದೂರು ದೇಗುಲಕ್ಕೆ ಭೇಟಿ ನೀಡಿದ್ದರು. ಆಗ ಮಾತನಾಡಿದ್ದ ಸಂಸದ ರಾಘವೇಂದ್ರ, 2025ರ ಏಪ್ರಿಲ್ ತಿಂಗಳಲ್ಲಿ ಸಿಗಂದೂರು ಸೇತುವೆ ಉದ್ಘಾಟನೆ ಆಗಲಿದೆ. ಇದು ದೇಶದ ಎರಡನೆ ಅತಿ ಉದ್ದದ ಸೇತುವೆಯಾಗಿದೆ. ಇದರ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದ್ದರು.
ಇದನ್ನೂ ಓದಿ » ದಿಢೀರ್ ಕುಸಿದು ಬಿದ್ದ ಅತಿಥಿ ಉಪನ್ಯಾಸಕಿ, ತಕ್ಷಣ ನೆರವಾದ ಡಾ. ಸರ್ಜಿ, ಆಗಿದ್ದೇನು?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422