SHIVAMOGGA LIVE NEWS | 14 MAY 2024
BYKODU : ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಡಾ. ಎಸ್.ರಾಮಪ್ಪ ಅವರ 71ನೇ ಹುಟ್ಟುಹಬ್ಬವನ್ನು ಭಕ್ತರು ಸಂಭ್ರಮದಿಂದ ಆಚರಿಸಿದರು. ವಿಶೇಷ ಪೂಜೆ, ರಕ್ತದಾನ, ರೋಗಿಗಳಿಗೆ ಹಣ್ಣು ವಿತರಣೆ ಮಾಡಲಾಯಿತು.
ಎಲ್ಲೆಲ್ಲಿ ಹೇಗೆ ಆಚರಣೆ?
ಭಕ್ತಾದಿಗಳು ಸಿಗಂದೂರು ದೇವಸ್ಥಾನ ಆವರಣದಲ್ಲಿ ಕೇಕ್ ಕತ್ತರಿಸಿ, ಸಂಭ್ರಮಾಚರಣೆ ಮಾಡಿದರು. ರೋಟರಿ ರಕ್ತನಿಧಿ ಸಹಯೋಗದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಸರ್ಕಾರಿ ಆಸ್ಪತ್ರೆ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಸೇರಿದಂತೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಡೆಸಲಾಯಿತು. ದೇವಾಲಯದ ಪ್ರಧಾನ ಕಾರ್ಯದರ್ಶಿ ಹೆಚ್.ಆರ್.ರವಿ ಕುಮಾರ್, ಈಡಿಗ ಸಂಘದ ಅಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ, ಪ್ರಕಾಶ್, ಕೆ.ಎಸ್. ಪ್ರಶಾಂತ್, ಅನಿತಾಕುಮಾರಿ ಮತ್ತಿತರರಿದ್ದರು.
ಸೊರಬ ತಾಲೂಕಿನ ಶ್ರೀ ಧನಾಂಜನೇಯ ಸ್ವಾಮಿ ದೇವಸ್ಥಾನ ಹಾಗೂ ಸಾಗರದ ಗಣಪತಿ ಮತ್ತು ಮಾರಿಕಾಂಬ ದೇವಸ್ಥಾನಗಳಲ್ಲಿ ಧರ್ಮದರ್ಶಿ ಪರವಾಗಿ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು.
ಸಿಗಂದೂರು ಚೌಡೇಶ್ವರಿ ದೇವಸ್ಥಾನವನ್ನು ರಾಜ್ಯದಲ್ಲಿಯೆ ಅತ್ಯಂತ ಮಾದರಿ ಕಾರಣಿಕ ಕ್ಷೇತ್ರವಾ ಗಿಸುವಲ್ಲಿ ಅವರ ಕೊಡುಗೆ ಅಪಾರವಾದುದ್ದು. ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿಸುವ ಸದುದ್ದೇಶ ದಿಂದ ಅನಾಥರಿಗೆ ಆಹಾರ ಪೂರೈಕೆ, ರಕ್ತದಾನ ಶಿಬಿರ ಮತ್ತಿತರ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.ನಾಗರಾಜ ಕೈಸೋಡಿ, ಅಭಿಮಾನಿ ಬಳಗದ ಜಿಲ್ಲಾ ಸಂಚಾಲಕ
ಸಾಗರ ಪ್ರಾಂತ್ಯ ಆರ್ಯ ಈಡಿಗರ ಸಂಘ ಹಾಗೂ ಡಾ. ಎಸ್. ರಾಮಪ್ಪ ಬಳಗದಿಂದ ಸರ್ಕಾರಿ ಉಪವಿಭಾಗೀಯ ಆಸ್ಪತ್ರೆ, ತಾಯಿ-ಮಗು ಸರ್ಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಮತ್ತು ಫಲಾಹಾರ ವಿತರಣೆ ಮಾಡಲಾಯಿತು.
ಇದನ್ನೂ ಓದಿ – ಶಿವಮೊಗ್ಗ ಸದ್ಯಕ್ಕೆ ಕೂಲ್ ಕೂಲ್, ಇವತ್ತು ಎಷ್ಟಿದೆ ತಾಪಮಾನ? ಯಾವಾಗ ಮಳೆಯಾಗಬಹುದು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200