ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SAGARA NEWS | 12 ಜನವರಿ 2022
ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಜಾತ್ರೆಗೆ ಕರೋನ ಕರಿನೆರಳು ಆವರಿಸಿದೆ. ಜಾತ್ರೆಯನ್ನು ರದ್ದುಗೊಳಿಸಲಾಗಿದ್ದು, ಮೊದಲ ದಿನ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಜನವರಿ 14 ಮತ್ತು 15ರಂದು ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಜಾತ್ರೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಕರೋನ ಮತ್ತು ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಜಾತ್ರೆಯನ್ನು ರದ್ದುಗೊಳಿಸಲಾಗಿದೆ. ಅಲ್ಲದೆ ಭಕ್ತರ ಪ್ರವೇಶಕ್ಕೂ ನಿರ್ಬಂಧ ವಿಧಿಸಲಾಗಿದೆ.
ಜಾತ್ರೆ ಇಲ್ಲ, ಪೂಜೆ ಮಾತ್ರ
ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಜಾತ್ರೆಗೆ ದೂರದೂರುಗಳಿಂದ ಅಸಂಖ್ಯ ಭಕ್ತರು ಬಂದು ದೇವರ ದರ್ಶನ ಪಡೆಯುತ್ತಿದ್ದರು. ಈ ವರ್ಷ ನಿಗದಿಯಾಗಿದ್ದ ಜಾತ್ರೆಯನ್ನು ಕರೋನ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ. ಆದರೆ ಪೂಜಾ ಕಾರ್ಯಗಳು ನಡೆಯಲಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.
ಜಾತ್ರಾ ಮಹೋತ್ಸವದ ಸಂಪ್ರದಾಯದ ಪ್ರಕಾರ ಜ.14ರ ಶುಕ್ರವಾರ ಬೆಳಿಗ್ಗೆ ಮೂಲ ಸ್ಥಳವಾದ ಸೀಗೆ ಕಣಿವೆಯಲ್ಲಿ ಪ್ರಥಮ ಪೂಜೆ ಸಲ್ಲಿಸಲಾಗುತ್ತದೆ. ಈ ವೇಳೆ ಆಡಳಿತ ಮಂಡಳಿಯ ಕುಟುಂಬಸ್ಥರ ಜೊತೆಗೆ ದೇವಸ್ಥಾನದ ಸಿಬ್ಬಂದಿಗಳಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ. ಉಳಿದವರಿಗೆ ಪ್ರವೇಶವಿಲ್ಲ ಎಂದು ತಿಳಿಸಲಾಗಿದೆ.
ಜನವರಿ 14ರಂದು ಜಾತ್ರೆಯ ಮೊದಲ ದಿನ. ಆ ದಿನ ಬೆಳಿಗ್ಗೆ 7ರಿಂದ ರಾತ್ರಿ 7ರ ವರೆಗೆ ಶ್ರೀ ದೇವಿಯ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ವಿಶೇಷ ಪೂಜೆ ಹಾಗೂ ಸೇವೆಗಳಿಗೆ ಭಕ್ತಾದಿಗಳಿಗೆ ಅವಕಾಶ ಇರುವುದಿಲ್ಲ ಭಕ್ತಾರು ಕಡ್ಡಾಯವಾಗಿ ಸರ್ಕಾರ ವಿಧಿಸಿರುವ ಕರೊನಾ ಮಾರ್ಗಸೂಚಿ ಪಾಲಿಸಬೇಕು ಎಂದು ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮನವಿ ಮಾಡಿದ್ದಾರೆ.
ಜನವರಿ 15ರಂದು ವೀಕೆಂಡ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ. ಹಾಗಾಗಿ ಆ ದಿನ ಭಕ್ತರು ದೇವಸ್ಥಾನ ಭೇಟಿಯನ್ನು ನಿರ್ಬಂಧಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422