ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 15 JANUARY 2021
ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಜಾತ್ರೆಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಆದರೆ ಕರೋನ ಹಿನ್ನೆಲೆ ಸರಳವಾಗಿ ಜಾತ್ರೆ ನಡೆಯುತ್ತಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮೂಲ ನೆಲೆಯಲ್ಲಿ ಪ್ರಥಮ ಪೂಜೆ
ಸಿಗಂದೂರು ದೇವಿಯ ಮೂಲ ನೆಲೆ ಸೀಗೆಕಣಿವೆಯಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ದೇಗುಲದ ಧರ್ಮದರ್ಶಿ ಡಾ.ರಾಮಪ್ಪ ಪೂಜೆ ಸಲ್ಲಿಸಿದರು. ಅಲ್ಲಿಂದ ಜ್ಯೋತಿಯನ್ನು ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ತರಲಾಯಿತು. ಜ್ಯೋತಿಗೆ ಮಹಿಳೆಯರು ಪೂರ್ಣ ಕುಂಭ ಸ್ವಾಗತ ನೀಡಿದರು.
ದೊಡ್ಡ ಸಂಖ್ಯೆಯ ಭಕ್ತರು
ಜಾತ್ರೆಯ ಹಿನ್ನೆಲೆ ದೇವಸ್ಥಾನಕ್ಕೆ ದೊಡ್ಡ ಸಂಖ್ಯೆಯ ಭಕ್ತರು ಆಗಮಿಸಿದ್ದರು. ಬೆಳಗ್ಗೆಯಿಂದಲೇ ನಿರಂತರವಾಗಿ ಭಕ್ತರು ಬಂದು, ದೇವಿಯ ದರ್ಶನ ಪಡೆದು ಪುನೀತರಾದರು. ಇನ್ನು, ಭಕ್ತರಿಗೆ ಅನ್ನಸಂರ್ಪಣೆ ಮಾಡಲಾಯಿತು. ರಾತ್ರಿ ಸಿಗಂದೂರು ಮೇಳದಿಂದ ಯಕ್ಷಗಾನ ಪ್ರದರ್ಶನ ನಡೆಯಿತು.
ಎರಡನೇ ದಿನ ಏನಿರುತ್ತೆ?
ಇವತ್ತು ಜಾತ್ರೆಯ ಎರಡನೇ ದಿನ. ಬೆಳಗ್ಗೆ 5 ಗಂಟೆಗೆ ಆಭರಣಗಳಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಮಧ್ಯಾಹ್ನ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಕರೂರು ಹೋಬಳಿಯ ವಿದ್ಯಾರ್ಥಿಗಳು ಹಾಗೂ ಸಾಧಕರನ್ನು ಸನ್ಮಾನಿಸಲಾಗುತ್ತದೆ.
VIDEO REPORT
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]