ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SORABA NEWS | 24 ಸೆಪ್ಟಂಬರ್ 2020
ಸೊರಬ ತಾಲೂಕಿನ ಹಿಂದಿನ ತಹಶೀಲ್ದಾರ್ ಚಂದ್ರಶೇಖರ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಚಂದ್ರಶೇಖರ್ ಅವರನ್ನು ಸಸ್ಪೆಂಡ್ ಮಾಡಿ ಸಾಗರ ಉಪವಿಭಾಗಾಧಿಕಾರಿ ಡಾ.ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಚಂದ್ರಶೇಖರ್ ಅವರು ಪ್ರಸ್ತುತ ಸಾಗರದ ಗ್ರೇಡ್-2 ತಹಶೀಲ್ದಾರ್ ಅಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಸಸ್ಪೆಂಡ್ ಆಗಲು ಕಾರಣವೇನು?
ಸೊರಬ ತಾಲೂಕು ಹಿರೇಶಕುನ ಗ್ರಾಮದ ಸರ್ವೇ ನಂ.113ರ ಸರ್ಕಾರಿ ಜಮೀನಿನಲ್ಲಿ ಹಕ್ಕುಪತ್ರವನ್ನು ಅಕ್ರಮವಾಗಿ ನೀಡಲಾಗಿದ್ದು, ತನಿಖೆ ನಡೆಸುವಂತೆ ಶಾಸಕ ಕುಮಾರ್ ಬಂಗಾರಪ್ಪ ಅವರು ಕೋರಿದ್ದರು. ಅದರಂತೆ ಸಾಗರ ಉಪವಿಭಾಗಾಧಿಕಾರಿ ಅವರು ತನಿಖೆ ನಡೆಸಿದ್ದು, ಹಿಂದಿನ ತಹಶೀಲ್ದಾರ್ ಅವರು ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾಗಿದೆ. ಹಾಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.
ಇನ್ನು ಪ್ರಕರಣ ಸಂಬಂಧ ಭ್ರಷ್ಟಾಚಾರ ನಿಗ್ರಹ ದಳದಿಂದ ತನಿಖೆ ನಡೆಸಬಹುದು ಎಂದು ಉಪವಿಭಾಗಾಧಿಕಾರಿ ಡಾ.ನಾಗರಾಜ್ ಆದೇಶಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422