ಶಿವಮೊಗ್ಗ ಲೈವ್.ಕಾಂ | SAGARA NEWS | 3 ಅಕ್ಟೋಬರ್ 2020
ಜೋಡಿ ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಭರವಸೆ ನೀಡಿದ್ದಾರೆ.
ಸಾಗರ ತಾಲೂಕು ಬ್ಯಾಕೋಡು ಗ್ರಾಮಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಭೇಟಿ ನೀಡಿದ್ದರು. ಇಲ್ಲಿನ ಉಪಠಾಣೆಗೆ ಭೇಟಿ ನೀಡಿ, ಕೊಲೆ ತನಿಖೆ ಕುರಿತು ಮಾಹಿತಿ ಪಡೆದರು. ಅಲ್ಲದೆ ದಂಪತಿ ಹತ್ಯೆಯಾದ ಮನೆಗೂ ತೆರಳಿದ್ದ ಜಿಲ್ಲಾ ರಕ್ಷಣಾಧಿಕಾರಿ, ದಂಪತಿಯ ಮಕ್ಕಳಿಂದ ಮಾಹಿತಿ ಪಡೆದರು.
ಉಪಠಾಣೆ ಮೇಲ್ದರ್ಜೆಗೇರಿಸಿ
ಇದೇ ವೇಳೆ ಜಿಲ್ಲಾ ರಕ್ಷಣಾಧಿಕಾರಿ ಅವರನ್ನು ಭೇಟಿಯಾದ ಬ್ಯಾಕೋಡು ಗ್ರಾಮಸ್ಥರು ಇಲ್ಲಿನ ಉಪಠಾಣೆಯನ್ನು ಮೇಲ್ದರ್ಜೆಗೇರಿಸಬೇಕು, ಪೊಲೀಸ್ ಜೀಪ್ ಒದಗಿಸಬೇಕು, ರಾತ್ರಿ ವೇಳೆ ಪೊಲೀಸರು ಗಸ್ತು ತಿರುಗಬೇಕು ಎಂದು ಮನವಿ ಮಾಡಿದರು. ಇದಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರು.
ಜೋಡಿ ಕೊಲೆ ಆರೋಪಿಗಳ ಬಂಧಿಸಿ
ಬ್ಯಾಕೋಡು ಜೋಡಿ ಕೊಲೆ ತನಿಖೆ ಚುರುಕುಗೊಳ್ಳಬೇಕು, ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಶಿವಮೊಗ್ಗ ಪೊಲೀಸ್ ಕಚೇರಿಗೆ ಭೇಟಿ ನೀಡಿ, ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಅವರು ಬ್ಯಾಕೋಡು ಗ್ರಾಮಕ್ಕೆ ಭೇಟಿ ನೀಡಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]