ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA NEWS | 27 ಆಗಸ್ಟ್ 2020
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜೋಗ ಜಲಪಾತ ವೀಕ್ಷಣೆಗೆ ಪ್ರತಿದಿನ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಇಲ್ಲಿಗೆ ಬರುವ ಪ್ರವಾಸಿಗರಲ್ಲಿ ಹಲವರು ಕೋವಿಡ್ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಇಂತಹ ಪ್ರವಾಸಿಗರಿಗೆ ಇವತ್ತು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಇವತ್ತು ಬಿಸಿ ಮುಟ್ಟಿಸಿದ್ದಾರೆ.
ಮಾಸ್ಕ್ ಹಾಕಲ್ಲ, ಸಾಮಾಜಿಕ ಅಂತರವಿಲ್ಲ
ಅಭಿವೃದ್ಧಿ ಕುರಿತು ಪರಿಶೀಲನೆಗೆ ಇವತ್ತು ಜಿಲ್ಲಾಧಿಕಾರಿ ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಸೇರಿದಂತೆ ಹಲವು ಅಧಿಕಾರಿಗಳು ಜೋಗ ಜಲಪಾತಕ್ಕೆ ಭೇಟಿ ನೀಡಿದ್ದರು. ಪರಿಶೀಲನೆಗೆ ತೆರಳಿದ್ದ ವೇಳೆ ಹಲವು ಪ್ರವಾಸಿಗರು ಮಾಸ್ಕ್ ಧರಿಸಿರಲಿಲ್ಲ. ಸಾಮಾಜಿಕ ಅಂತರವನ್ನು ಕಾಪಾಡಿಕೊಂಡಿರಲಿಲ್ಲ.
‘ಇದೇನು ಜಾತ್ರೆನಾ, ಜವಾಬ್ದಾರಿ ಇಲ್ವಾ?’
ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಪ್ರವಾಸಿಗರಿಗೆ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಬಿಸಿ ಮುಟ್ಟಿಸಿದರು. ಯಾರೆಲ್ಲ ಮಾಸ್ಕ್ ಧರಿಸಿಲ್ಲ, ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ ಅವರ ವಿರುದ್ಧ ದಂಡ ಹಾಕಲಾಗುತ್ತದೆ ಎಂದರು. ಈ ವೇಳೆ ಸಾಮಾಜಿಕ ಅಂತರವಿಲ್ಲದೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದವರಿಗೆ ವಾರ್ನಿಂಗ್ ನೀಡಿದರು. ಇದೇನು ಜಾತ್ರೆನಾ ಎಂದು ತರಾಟೆಗೆ ತೆಗೆದುಕೊಂಡರು.
ಡಿಸಿ, ಎಸ್‍ಪಿ ಜೋಗ ಭೇಟಿಯ ವಿಡಿಯೋ ರಿಪೋರ್ಟ್ ಇಲ್ಲಿದೆ
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]