SHIVAMOGGA LIVE NEWS | 24 JUNE 2024
SAGARA : ಎರಡು ದಿನಗಳ ಧಾರ್ಮಿಕ ಕಾರ್ಯಕ್ರಮ ಅಂಗವಾಗಿ ಭಾನುವಾರ ಸಂಜೆ ಶೃಂಗೇರಿ (Sringeri) ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ ಸಾಗರಕ್ಕೆ ಆಗಮಿಸಿದರು. ಸಾಗರದ ಶಾರದಾಂಬಾ ದೇವಸ್ಥಾನದಲ್ಲಿ ಭಕ್ತರಿಗೆ ಆಶೀರ್ವಾದ ನೀಡಿದರು.
![]() |
ಸುರಿವ ಮಳೆಯಲ್ಲೂ ವೈಭವದ ಸ್ವಾಗತ
ಸುರಿಯುತ್ತಿರುವ ಮಳೆಯಲ್ಲೇ ಭಕ್ತರು ಶ್ರೀಗಳಿಗೆ ಭವ್ಯ ಸ್ವಾಗತ ಕೋರಿದರು. ಮಂತ್ರಘೋಷದೊಂದಿಗೆ ಸಾಗರದ ಶಿವಪ್ಪ ನಾಯಕ ವೃತ್ತದಿಂದ ನಗರದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಯಿತು. ಚಂಡೆ, ನಗಾರಿ, ನಾದಸ್ವರ, ವಿವಿಧ ಚದ್ಮವೇಷಗಳು ಮೆರವಣಿಗೆಗೆ ಮೆರುಗು ತಂದವು. ಜೋಗ ರಸ್ತೆಯಲ್ಲಿರುವ ಚಾರೋಡಿ ಕೊಂಕಣಿ ಆಚಾರ್ ಸಮಾಜದ ಶಾರದಾಂಬ ದೇವಾಲಯಕ್ಕೆ ಶ್ರೀಗಳನ್ನು ಕರೆತರಲಾಯಿತು.
ಸಾಗರಕ್ಕೆ ಆಗಮಿಸಿದ ಶೃಂಗೇರಿ ಶ್ರೀಗಳ ಆಶೀರ್ವಾದ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ
ಶಂಕರ ಮಠದ ಧರ್ಮಾಧಿಕಾರಿ ಅಶ್ವಿನಿಕುಮಾರ್, ಚಾರೋಡಿ ಕೊಂಕಣಿ ಆಚಾರ್ ಸಮಾಜದ ಅಧ್ಯಕ್ಷ ಕೆ.ವಿ.ಜಯರಾಮ್ ಹಾಗೂ ವಿವಿಧ ಸಮಾಜದ ಮುಖಂಡರು ಇದ್ದರು. ಜೂ.24ರ ಬೆಳಗ್ಗೆ ಶ್ರೀಗಳು ಅಮ್ಮನವರ ಮರು ಪ್ರತಿಷ್ಠಾಪನೆ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಿದ್ದು ನಂತರ ಶಾರದಾಂಬ ವಾಣಿಜ್ಯ ಸಂಕೀರ್ಣ ಕಟ್ಟಡವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಶ್ರೀಗಳು ಶ್ರೀ ಮಾರಿಕಾಂಬ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.
ಇದನ್ನೂ ಓದಿ – ಕರ್ನಾಟಕದ 10 ಜಿಲ್ಲೆಗಳಿಗೆ ಇವತ್ತು ಆರೆಂಜ್ ಅಲರ್ಟ್, 6 ಜಿಲ್ಲೆಗಳಿಗೆ ಯಲ್ಲೊ ಅಲರ್ಟ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200