ಸಾಗರದಲ್ಲಿ ವಿದ್ಯಾರ್ಥಿಗಳ ದಿಢೀರ್‌ ಪ್ರತಿಭಟನೆ, ಶಾಸಕ ಬೇಳೂರು ಗೋಪಾಲಕೃಷ್ಣ ಫೋನ್‌ ಬಳಿಕ ಹೋರಾಟ ಅಂತ್ಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 MAY 2023

SAGARA : ಕಾಲೇಜು ಬಳಿ ಕೆಎಸ್‌ಆರ್‌ಟಿಸಿ ಬಸ್ಸುಗಳ (Protest For Bus) ನಿಲುಗಡೆಗೆ ಒತ್ತಾಯಿಸಿ ಸಾಗರದ ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳು ಬಸ್‌ಗಳನ್ನು ತಡೆದು ದಿಢೀರ್‌ ಪ್ರತಿಭಟನೆ ನಡೆಸಿದರು.

Students-protest-for-KSRTC-Buses-in-Sagara

ಸರ್ಕಾರಿ ಪದವಿ ಕಾಲೇಜು ಬಳಿ ಕೆಎಸ್‌ಆರ್‌ಟಿಸಿ ಬಸ್ಸುಗಳನ್ನು ನಿಲ್ಲಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಬಸ್ಸುಗಳನ್ನು ತಡೆದು ಪ್ರತಿಭಟನೆ ನಡೆಸಿದರು.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ಸ್ಥಳಕ್ಕೆ ಆಗಮಿಸಿದ ಡಿಪೋ ಮ್ಯಾನೇಜರ್‌ ರಾಜಪ್ಪ ಅವರು, ಬೆಳಗ್ಗೆ ಸಾಗರ – ಶಿವಮೊಗ್ಗ ಮಾರ್ಗದಲ್ಲಿ ಸಂಚರಿಸುವ ಸಾಗರ ಡಿಪೋದ ಎಲ್ಲ ಬಸ್ಸುಗಳಲ್ಲಿಯು ವಿದ್ಯಾರ್ಥಿಗಳು ಸಂಚರಿಸಬಹುದು. ಆದರೆ ಸಂಜೆ ಕಾಲೇಜು ಬಿಡುವ ವೇಳೆಗೆ ಸಾಗರ ಡಿಪೋದ ಬಸ್ಸುಗಳು ಈ ಮಾರ್ಗದಲ್ಲಿ ಸಂಚರಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ – ಬೈಕ್‌ಗೆ ಸಿಟಿ ಬಸ್‌ ಡಿಕ್ಕಿ, ರೊಚ್ಚಿಗೆದ್ದ ಜನರಿಂದ ಗ್ಲಾಸ್‌ಗೆ ಕಲ್ಲು

ಫೋನ್‌ ಮೂಲಕ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಅಗತ್ಯ ಬಸ್‌ ಸೌಕರ್ಯ ಒದಗಿಸುವ ಕುರಿತು ಸಾಗರಕ್ಕೆ ಬಂದ ಬಳಿಕ ಡಿಪೋ ಮ್ಯಾನೇಜರ್‌ ಜೊತೆ ಚರ್ಚೆ ನಡೆಸುತ್ತೇನೆ ಎಂದು ಭರವಸೆ ನೀಡಿದರು.

ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಭರವಸೆ ಹಿನ್ನೆಲೆ ವಿದ್ಯಾರ್ಥಿಗಳು ಪ್ರತಿಭಟನೆ ಕೈ ಬಿಟ್ಟರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment