SHIVAMOGGA LIVE NEWS | 26 JUNE 2024
SAGARA : ಎಲ್ಬಿಎಸ್ ಕಾಲೇಜು ಮುಂಭಾಗ ಜೀಬ್ರಾ ಕ್ರಾಸ್ ಮತ್ತು ಹಂಪ್ಗಳನ್ನು (Humps) ಅಳವಡಿಸುವಂತೆ ಆಗ್ರಹಿಸಿ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಬಳಿಕ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.
![]() |
ಜೂ.22ರಂದು ಅಪಘಾತ ಸಂಭವಿಸಿ ಎಲ್ಬಿಎಸ್ ಕಾಲೇಜು ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಅನುಷಾ ಮೃತಪಟ್ಟಿದ್ದಾರೆ. ಕಾಲೇಜು ಮುಂಭಾಗ ಸ್ಪೀಡ್ ಬ್ರೇಕರ್ ಇಲ್ಲದಿರುವುದೆ ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ಜೋಗ ರಸ್ತೆ ಕಳೆದ ವರ್ಷ ಅಗಲೀಕರಣ ಮಾಡಲಾಗಿದೆ. ಈ ರಸ್ತೆಯ ಅಕ್ಕಪಕ್ಕದಲ್ಲಿ ಹಲವು ಶಾಲೆ, ಕಾಲೇಜುಗಳಿವೆ. ವಾಹನಗಳು ವೇಗವಾಗಿ ಓಡಾಡುವುದರಿಂದ ಅಪಘಾತಗಳು ಸಂಭವಿಸುತ್ತಿವೆ. ಈಗಾಗಲೆ ಹಲವು ವಿದ್ಯಾರ್ಥಿಗಳು ಅಪಘಾತಕ್ಕೀಡಾಗಿ ಗಾಯಗೊಂಡಿರುವ ಉದಾಹರಣೆ ಇದೆ. ಆದ್ದರಿಂದ ಎಲ್ಲ ಶಾಲೆ, ಕಾಲೇಜುಗಳ ಬಳಿ ವಾಹನಗಳ ವೇಗ ತಗ್ಗಿಸಲು ಸ್ಪೀಡ್ ಬ್ರೇಕರ್ ಅಳವಡಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.
ಸದ್ಯದಲ್ಲೆ ಸ್ಪೀಡ್ ಬ್ರೇಕರ್ ಅಳವಡಿಕೆ
ನಗರಸಭೆಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚುತ್ತಿವೆ. ಅಗತ್ಯ ಇರುವ ಕಡೆ ಬ್ಯಾರಿಕೇಡ್ ಮತ್ತು ಸ್ಪೀಡ್ ಬ್ರೇಕರ್ ಅಳವಡಿಸಲು ಮಾಹಿತಿ ಕೇಳಲಾಗಿದೆ. ಸದ್ಯದಲ್ಲೆ ಇವುಗಳನ್ನು ಅಳವಡಿಸಲಾಗುತ್ತದೆ. ಇನ್ನು ಅಲ್ಲಲ್ಲಿ ಕಳಪೆ ಕಾಮಗಾರಿಯಾಗಿದೆ ಎನ್ನಲಾಗುತ್ತಿದೆ. ಅದನ್ನು ಕೂಡ ಪರಿಶೀಲಿಸಲಾಗುತ್ತದೆ ಎಂದರು.
ಇದನ್ನೂ ಓದಿ – ಸಾಗರ ನರಸಭೆಗೆ MLA ದಿಢೀರ್ ಭೇಟಿ, ಕಾರ್ಯವೈಖರಿ ಪರಿಶೀಲನೆ, ಕ್ಷೇತ್ರದ ಅಭಿವೃದ್ಧಿ ಕುರಿತು ಹೇಳಿದ್ದೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200