ಶಿವಮೊಗ್ಗ ಲೈವ್
ತ್ಯಾಗರ್ತಿ: ಆನಂದಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗದ ಸಿಬ್ಬಂದಿ ಕುರಿತು ಮಾಹಿತಿ ಪಡೆದು ಆಕ್ರೋಶ ವ್ಯಕ್ತಪಡಿಸಿದರು.
ಆಸ್ಪತ್ರೆಯ ವ್ಯವಸ್ಥೆ ಹಾಗೂ ಸಿಬ್ಬಂದಿಯ ಹಾಜರಾತಿ ಪರಿಶೀಲಿಸಿ, ಪ್ರತಿದಿನ ಬೆಳಿಗ್ಗೆ 9 ಗಂಟೆಗೆ ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಸೂಚಿಸಿದರು. ರೋಗಿಗಳಿಗೆ ತ್ವರಿತವಾಗಿ ಚಿಕಿತ್ಸೆ ನೀಡುವಂತೆ ನಿರ್ದೇಶಿಸಿದರು.

‘ರೋಗಿಗಳು ಹಾಗೂ ಸಾರ್ವಜನಿಕರಿಂದ ಸಿಬ್ಬಂದಿ ವಿರುದ್ಧ ದೂರುಗಳು ಬಂದರೆ ಹಾಗೂ ಕರ್ತವ್ಯದಲ್ಲಿ ನಿರ್ಲಕ್ಷ್ಯ ಕಂಡುಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ – ಬೇಳೂರು ಗೋಪಾಲಕೃಷ್ಣ, ಸಾಗರ ಶಾಸಕ ಇದೇ ವೇಳೆ ಚಿಕಿತ್ಸೆಗೆ ಬಂದಿದ್ದ ರೋಗಿಗಳು, ಅವರ ಸಂಬಂಧಿಕರನ್ನು ಬೇಳೂರು ಗೋಪಾಲಕೃಷ್ಣ ಮಾತನಾಡಿಸಿದರು. ಆನಂದಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕುರಿತು ಮಾಹಿತಿ ಪಡೆದರು.