ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
KARGAL NEWS, 21 SEPTEMBER 2024 : ಜೋಗ-ಕಾರ್ಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಿನ್ನಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಮನೆಯಲ್ಲಿ ಮಲಗಿದ್ದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ರವಿಕುಮಾರ್ ಜೈನ್ (48) ಅವರ ತಲೆಗೆ ತೀವ್ರವಾದ ಹೊಡೆತ ಬಿದ್ದಿದ್ದು (Suspicious), ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮೃತಪಟ್ಟಿದ್ದಾರೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಎಂದಿನಂತೆ ಮಂಗಳವಾರ ಸಂಘದ ಕೆಲಸ ಮುಗಿಸಿ ಮನೆಗೆ ಮರಳಿ ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದ ರವಿಕುಮಾರ್ ಅವರ ತಲೆಗೆ ಬಲವಾದ ಹೊಡೆತ ಬಿದ್ದಿದ್ದು, ಅವರ ತಾಯಿ ಸಂಜೆ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ರಕ್ತದ ಮಡುವಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ರವಿಕುಮಾರ್ ಅವರನ್ನು ಅಕ್ಕಪಕ್ಕದವರ ಸಹಾಯದಿಂದ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿ ಯಾಗದೇ ಮೃತಪಟ್ಟಿದ್ದಾರೆ. ಅವಿವಾಹಿತ ರಾಗಿದ್ದ ಮೃತ ವ್ಯಕ್ತಿ ಮಿತ ಭಾಷಿಯಾಗಿದ್ದು, ಘಟನೆ ಗ್ರಾಮಸ್ಥರಲ್ಲಿ ದಿಗ್ಧಮೆ ಮೂಡಿಸಿದೆ. ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಸಾ ಮಿಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮಾಲೀಕನ ಮಗ