ಸಾಗರ ತಹಶೀಲ್ದಾರ್‌ ನೇತೃತ್ವದಲ್ಲಿ ದಾಳಿ, ಎರಡು ಲಾರಿಗಳು ಸೀಜ್‌, ಕಾರಣವೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಸಾಗರ: ತಾಲೂಕಿನ ಹಿರೇನೆಲ್ಲೂರು ಗ್ರಾಮದಲ್ಲಿ ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತ್ತಿದ್ದ ಎರಡು ಲಾರಿಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಸಾಗರ ತಹಶೀಲ್ದಾರ್‌ ಡಾ. ಪ್ರತಿಭಾ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಜಂಬಿಟ್ಟಿಗೆ ಸಾಗಿಸುತ್ತಿದ್ದಾಗ ಲಾರಿಗಳನ್ನು ತಡೆದು ಪರಿಶೀಲಿಸಿದ್ದಾರೆ. ತಹಶೀಲ್ದಾರ್‌ ಸೂಚನೆ ಮೇರೆಗೆ ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ.

Sagara-Tahasildhar-Dr-Prathiba-Seized-two-trucks-carrying-illegal-laterite-stones.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಾಗರ ತಹಶೀಲ್ದಾರ್, ‘ಸಾಗರದಲ್ಲಿ ಅಕ್ರಮ ಮರಳು ಹಾಗೂ ಜಂಬಿಟ್ಟಿಗೆ ಸಾಗಾಣಿಕೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯುವ ನಿಟ್ಟಿನಲ್ಲಿ ತಾಲೂಕು ಆಡಳಿತ ಸದಾ ಜಾಗೃತವಾಗಿರುತ್ತದೆ’ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಪಿಡಿಒ ರಾಘವೇಂದ್ರ, ಗ್ರಾಮ ಸಹಾಯಕ ಲೋಕೇಶ್, ಗ್ರಾಮ ಆಡಳಿತ ಅಧಿಕಾರಿ ಭೀಮಣ್ಣ , ರೆವೆನ್ಯೂ ಇನ್ಸ್‌ಪೆಕ್ಟರ್‌ ವಿನಾಯಕ, ಪೊಲೀಸ್‌ ಸಿಬ್ಬಂದಿ ಈ ಸಂದರ್ಭ ಇದ್ದರು.