ತಹಶೀಲ್ದಾರ್‌ ನೇತೃತ್ವದಲ್ಲಿ ದಾಳಿ, ಸರ್ಕಾರಿ ಜಮೀನು ಒತ್ತುವರಿ ತೆರವು, ಕಬ್ಬಿಣದ ಗೇಟ್‌ ಕಿತ್ತೊಗೆದು ಎಚ್ಚರಿಕೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | ಸಾಗರ

ಸಾಗರ ತಾಲೂಕಿನ ಬಾರಂಗಿ ಹೋಬಳಿಯ ಭಾನುಕುಳಿ ಗ್ರಾಮದಲ್ಲಿ ಒಂದು ಎಕರೆಗೂ ಹೆಚ್ಚು ಸರ್ಕಾರಿ ಜಮೀನಿನ ಒತ್ತುವರಿಯನ್ನು ತಹಶೀಲ್ದಾರ್ ಡಾ. ಪ್ರತಿಭಾ ಆರ್ ನೇತೃತ್ವದಲ್ಲಿ ತೆರವುಗೊಳಿಸಲಾಗಿದೆ. ಅತಿಕ್ರಮಣಕಾರರು ಜಮೀನನ್ನು ಒತ್ತುವರಿ ಮಾಡಿ ಅಳವಡಿಸಿದ್ದ ಕಬ್ಬಿಣದ ಗೇಟನ್ನು ಜೆಸಿಬಿ ಬಳಸಿ ತೆರವುಗೊಳಿ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಜೋರು ಮಳೆಯಲ್ಲೂ ಕಾರ್ಯಾಚರಣೆ

ಜೋರು ಮಳೆಯ ನಡುವೆಯು ತಹಶೀಲ್ದಾರ್ ಮತ್ತು ಸಿಬ್ಬಂದಿ ಒತ್ತುವರಿ ತೆರವು ಕಾರ್ಯ ನಡೆಸಿದರು. ತೆರವುಗೊಳಿಸಿದ ಜಮೀನಿನಲ್ಲಿ ಕಂದಾಯ ಇಲಾಖೆಗೆ ಸೇರಿದ ಸ್ವತ್ತು ಹಾಗೂ ಅತಿಕ್ರಮಣ ನಿಷೇಧಿಸಲಾಗಿದೆ ಎಂಬ ಫಲಕವನ್ನು ಹಾಕಲಾಯಿತು.

Sagara-Thasildhar-Dr-Prathiba-clears-encroachment-at-Bharangi-Hobli-in-sagara

ಭಾನುಕುಳಿ ಗ್ರಾಮದ ಸರ್ವೇ ನಂಬರ್ 44 ರಲ್ಲಿ ಒತ್ತುವರಿ ತೆರವು ಮಾಡಲಾಗಿದೆ. ಸಾಗರ ತಾಲೂಕಿನಲ್ಲಿ ಎಲ್ಲಿಯಾದರೂ ಸರ್ಕಾರಿ ಜಮೀನು ಒತ್ತುವರಿ ಮಾಡುವುದು ಕಂಡುಬಂದರೆ ಭೂ ಕಂದಾಯ ಕಾಯ್ದೆ 192/A ಅಡಿ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು.

– ಡಾ.ಪ್ರತಿಭಾ.ಆರ್‌, ಸಾಗರ ತಹಶೀಲ್ದಾರ್‌

ತಹಶೀಲ್ದಾರ್‌ ಮತ್ತು ಸಿಬ್ಬಂದಿ ಕಾರ್ಯಾಚರಣೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಉಪ ತಹಶೀಲ್ದಾರ್ ಮಾಲಿನಿ, ರೇವಿನ್ಯೂ ಇನ್ಸ್‌ಪೆಕ್ಟರ್ ಬೀರಪ್ಪ, ಪಿಡಿಒ ವಿಶ್ವಾಸ್, ಸರ್ವೆಯರ್ ಹನುಮಂತಪ್ಪ ಹಾಗೂ ಅರಣ್ಯ ಇಲಾಖೆ ಅಧಿಕಾರಿ ನವೀನ್ ಕುಮಾರ್ ಸೇರಿ ಹಲವರು ಇದ್ದರು.