ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA NEWS | 03 FEBRUARY 2021
ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ವಿರೋಧಿಸಿ ಸಾಗರ ತಾಲೂಕು ತಾಳಗುಪ್ಪದಲ್ಲಿ ಇವತ್ತು ಪ್ರತಿಭಟನೆ ನಡೆಸಲಾಯಿತು. ರಸ್ತೆ ತಡೆ ನಡೆಸಿದ ಸ್ಥಳೀಯರು, ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಷ್ಟ್ರೀಯ ಹೆದ್ದಾರಿ 206ರಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಸರಿಯಾಗಿ ಮಣ್ಣು ಹಾಕಿಲ್ಲ. ಗ್ರಾವೆಲ್ ಸರಿಯಾಗಿ ಆಗದೆ ಇರುವುದರಿಂದ ಅಪಘಾತಗಳು ಹೆಚ್ಚಾಗಿವೆ. ಇಕ್ಕೆಲಗಳಲ್ಲಿ ಸರಿಯಾಗಿ ಡಾಂಬರೀಕರಣವು ಆಗಿಲ್ಲ. ಹಾಗಾಗಿ ರಸ್ತೆಯ ಅಂಚಿಗೆ ಬಂದು ಹಲವು ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡಿದ್ದಾರೆ.
ಹೆದ್ದಾರಿಯಲ್ಲಿನ ಈ ಅವ್ಯವಸ್ಥೆ ಸರಿಪಡಿಸಬೇಕು ಎಂದು ಹಲವು ಭಾರಿ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಆದರೆ ಈತನಕ ಯಾವುದೆ ಕ್ರಮ ಕೈಗೊಂಡಿಲ್ಲ. ಇನ್ನಾದರೂ ರಸ್ತೆಯ ಪಕ್ಕದಲ್ಲಿ ಮಣ್ಣು ಹಾಕಿಸಿ ವಾಹನ ಸವಾರರ ಆತಂಕ ದೂರಗೊಳಿಸಬೇಕಿದೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಸಾಗರ – ತಾಳಗುಪ್ಪ ಹೆದ್ದಾರಿಯಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿದ ಸ್ಥಳೀಯರು, ಗ್ರಾಮ ಪಂಚಾಯಿತಿ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು.
ಪ್ರಮುಖರಾದ ರಾಮು ಗುಡ್ಡೆಮನೆ, ಹೊಟೇಲ್ ಗುರು, ಎಸ್.ವಿ.ಓಂಕಾರ್ ಜೈನ್, ಶಿವರಾಮ್ ಪಡವಗೋಡು, ಚಂದ್ರು ಸೈದೂರು ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422