ಸಾಗರ : 12ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ (Sammelana) ಸಾಗರದ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಲೇಖಕ ಅ.ರಾ.ಶ್ರೀನಿವಾಸ್ ಸರ್ವಾಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಯಲಿದೆ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿ.ಟಿ.ಸ್ವಾಮಿ ತಿಳಿಸಿದ್ದಾರೆ.
ಸಮ್ಮೇಳನದಲ್ಲಿ ಏನೇನೆಲ್ಲ ಕಾರ್ಯಕ್ರಮವಿದೆ?
ಬೆಳಿಗ್ಗೆ 9ಕ್ಕೆ ಉಪವಿಭಾಗಾಧಿಕಾರಿ ಯತೀಶ್ ಆರ್. ರಾಷ್ಟ್ರಧ್ವಜಾರೋಹಣ ಮಾಡಲಿದ್ದಾರೆ. ನಂತರ ನಗರಸಭೆ ಆವರಣದಿಂದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ. ಇದೆ ಮೊದಲ ಬಾರಿ ಸಾಹಿತ್ಯ ಸಮ್ಮೇಳನದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ.

ಬೆಳಿಗ್ಗೆ 10ಕ್ಕೆ ಗಾಂಧಿ ಮೈದಾನದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಸಮ್ಮೇಳನ ಉದ್ಘಾಟಿಸಲಿದ್ದಾರೆ. ಬೆಳಗ್ಗೆ 11.45ಕ್ಕೆ ಮಲೆನಾಡಿನ ಪ್ರಸ್ತುತ ತಲ್ಲಣಗಳು ಕುರಿತು ಕೃಷಿಕ ಸೀತಾರಾಮ್ ಕುರುವರಿ, ಮಲೆನಾಡಿನ ಸಾಹಿತ್ಯದ ಪ್ರಸ್ತುತ ಸ್ಥಿತಿಗತಿ ಕುರಿತು ಕುಂಸಿ ಉಮೇಶ್ ಮಾತನಾಡಲಿದ್ದಾರೆ.
ಮಧ್ಯಾಹ್ನ 1ಕ್ಕೆ ಸಮ್ಮೇಳನಾಧ್ಯಕ್ಷರ ಸಾಹಿತ್ಯ ಅವಲೋಕನ ಗೋಷ್ಠಿಯಲ್ಲಿ ಚಿಂತಕ ದೇವೇಂದ್ರ ಬೆಳೆಯೂರು ಉಪನ್ಯಾಸ ನೀಡಲಿದ್ದಾರೆ. ಮಧ್ಯಾಹ್ನ 2.45ಕ್ಕೆ ಹಾ.ಉಮೇಶ್ ಅಧ್ಯಕ್ಷತೆಯಲ್ಲಿ ಕವಿ ಗೋಷ್ಠಿ ಆಯೋಜಿಸಲಾಗಿದೆ. ಸಂಜೆ 4.30ಕ್ಕೆ ಮಹಿಳೆ-ಪ್ರಸ್ತುತ ಸಾಮಾಜಿಕ ಮನೋಭಾವ ಕುರಿತು ರಂಗ ಕಲಾವಿದೆ ವಿದ್ಯಾ ಹೆಗಡೆ ಮಾತನಾಡಲಿದ್ದಾರೆ.
ಸಂಜೆ 5.30ಕ್ಕೆ ವಿವಿಧ ಕ್ಷೇತ್ರಗಳ ಸಾಧಕರನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಸನ್ಮಾನಿಸಲಿದ್ದಾರೆ. ಸಂಜೆ 7ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಹೆಚ್.ಹಾಲಪ್ಪ ಹರತಾಳು ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ » ರಾತ್ರೋರಾತ್ರಿ ಶಿವಮೊಗ್ಗದಲ್ಲಿ ಪ್ರಮೋದ್ ಮುತಾಲಿಕ್‌ಗೆ ತಡೆ, ನೊಟೀಸ್ ಕೊಟ್ಟು ಗಡಿ ದಾಟಿಸಿದ ಪೊಲೀಸ್, ಯಾಕೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200