SAGARA NEWS, 16 OCTOBER 2024 : ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗ ಶಾಲೆ ಆವರಣದಲ್ಲಿಯೇ ಕುಸಿದು ಬಿದ್ದು ಶಿಕ್ಷಕರೊಬ್ಬರು (Teacher) ಮೃತಪಟ್ಟಿದ್ದಾರೆ. ಸಾಗರ ತಾಲೂಕು ಖಾಸಗಿ ಶಾಲೆಯೊಂದರಲ್ಲಿ ಇಂದು ಮಧ್ಯಾಹ್ನ ಘಟನೆ ಸಂಭವಿಸಿದೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಪ್ರಗತಿ ಸಂಯುಕ್ತ ಪ್ರೌಢಶಾಲೆಯ ಶಿಕ್ಷಕ ಗಜಾನನ ಹಿರೇಮಠ ಮೃತರು. ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಅವರನ್ನು ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿಟಿ ಬಸ್ ಪಲ್ಟಿ
ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ, ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಪದಾಧಿಕಾರಿಗಳು, ಶಿಕ್ಷಕರು ಸೇರಿದಂತೆ ಹಲವರು ಆಸ್ಪತ್ರೆಗೆ ಭೇಟಿ ನೀಡಿದ್ದರು.
