ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 9 JULY 2023
SAGARA : ವೀಕೆಂಡ್ ಹಿನ್ನೆಲೆ ವಿಶ್ವವಿಖ್ಯಾತ ಜೋಗ ಜಲಪಾತ (JOG FALLS) ವೀಕ್ಷಣೆಗೆ ಇವತ್ತು ದೊಡ್ಡ ಸಂಖ್ಯೆಯ ಪ್ರವಾಸಿಗರು ಆಗಮಿಸಿದ್ದರು. ಮಂಜಿನ ಮರೆಯಲಿ, ಜೋರು ಮಳೆಯ ನಡುವೆ ಜಲಪಾತದಲ್ಲಿ ನೀರು ಧುಮ್ಮಿಕ್ಕುವುದನ್ನು ಕಣ್ತುಂಬಿಕೊಂಡು ಪ್ರವಾಸಿಗರು ಖುಷಿ ಪಟ್ಟರು.
ಉತ್ತರ ಕನ್ನಡ ಜಿಲ್ಲೆ ಮತ್ತು ಸಾಗರ ತಾಲೂಕಿನಲ್ಲಿ ಮಳೆ ಜೋರಾಗಿದೆ. ಈ ಹಿನ್ನೆಲೆ ಜೋಗ ಜಲಪಾತ ಕಳೆಗಟ್ಟಿದೆ. ರಾಜ, ರಾಣಿ, ರೋರರ್, ರಾಕೆಟ್ ಜಲಪಾತಗಳು ಭೊರ್ಗರೆಯುತ್ತ ಧುಮ್ಮಕ್ಕುತ್ತಿವೆ. ಇದನ್ನು ಕಣ್ತುಂಬಿಕೊಳ್ಳಲು ದೂರದೂರುಗಳಿಂದ ಪ್ರವಾಸಿಗರು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ್ದಾರೆ.
ವೀಕೆಂಡ್ ಹಿನ್ನೆಲೆ ಫುಲ್ ರಶ್
ಶನಿವಾರ ಮತ್ತು ಭಾನುವಾರದಂದು ಜೋಗ ಜಲಪಾತ (JOG FALLS) ವೀಕ್ಷಣೆಗೆ ಸಾವಿರಾರು ಪ್ರವಾಸಿಗರು ಆಗಮಿಸಿದ್ದರು. ಬೆಂಗಳೂರು, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಯ ಪ್ರವಾಸಿಗರು, ಶಿವಮೊಗ್ಗ ಜಿಲ್ಲೆಯ ಜನರು ಕಳೆಗಟ್ಟಿದ ಜೋಗ ಕಣ್ತುಂಬಿಕೊಳ್ಳಲು ಆಗಮಿಸಿದ್ದರು.
ಮಂಜಿನ ಮರೆಯಲ್ಲಿ ಜೋಗ ವೈಭವ ಕಣ್ತುಂಬಿಕೊಂಡು ಪ್ರವಾಸಿಗರು ಸಂಭ್ರಮ ಪಟ್ಟರು. ಜಲಪಾತದ ಮುಂದೆ ನಿಂತು ಫೋಟೊ, ಸೆಲ್ಫಿ ಕ್ಲಿಕ್ಕಿಸಿಕೊಂಡು ಖುಷಿಪಟ್ಟರು. ಜೋರು ಮಳೆಯಲ್ಲಿ ನಿಂತು ಜಲಪಾತವನ್ನು ವೀಕ್ಷಿಸಿ ಸಂಭ್ರಮಿಸಿದರು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಾದ್ಯಂತ ಕಾಣೆಯಾದ ಮಳೆ, 24 ಗಂಟೆಯಲ್ಲಿ ಯಾವ್ಯಾವ ತಾಲೂಕು, ಹೋಬಳಿಯಲ್ಲಿ ಎಷ್ಟಾಗಿದೆ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422