ಜಿಂಕೆ ಬೇಟೆಯಾಡಿದ್ದ ಮೂವರು ಬಂದೂಕು ಸಹಿತ ಅರೆಸ್ಟ್‌, ಸಿಕ್ಕಿಬಿದ್ದಿದ್ದು ಹೇಗೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 APRIL 2024

SAGARA : ಶರಾವತಿ ಸಿಂಘಳೀಕ ವನ್ಯಜೀವಿ ಅಭಯಾರಣ್ಯದಲ್ಲಿ ಜಿಂಕೆ ಬೇಟೆಯಾಡಿದ ಆರೋಪದ ಮೇಲೆ ಮೂವರನ್ನು ಕಾರ್ಗಲ್‌ ವನ್ಯಜೀವಿ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಬಾಳೆಕೊಪ್ಪದ ಸತೀಶ್‌ (39), ಯಡೆಹಳ್ಳಿ ಟಿ.ನಾಗರಾಜ (23) ಮತ್ತು ಪ್ರಜ್ವಲ್‌ (23) ಬಂಧಿತರು.

ಅಂಬಾರಗೋಡ್ಲು ಗ್ರಾಮದ ಶರಾವತಿ ಹಿನ್ನೀರಿನ ಅಂಚಿನಲ್ಲಿ ನಾಡ ಬಂದೂಕಿನಿಂದ ಜಿಂಕೆ ಬೇಟೆಯಾಡಿ ಮಾಂಸವನ್ನು ಪಾಲು ಮಾಡಿಕೊಳ್ಳುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಜಿಂಕೆ ಚರ್ಮ, ತಲೆ, ಬಂದೂಕು ವಶಕ್ಕೆ ಪಡೆಯಲಾಗಿದೆ.

ವಲಯ ಅರಣ್ಯಾಧಿಕಾರಿ ಸಂಧ್ಯಾ, ಉಪ ವಲಯ ಅರಣ್ಯಾಧಿಕಾರಿ ಜಿ.ಕೆ. ಸುಧಾಕರ್, ಮೋಜಣಿದಾರ, ಸಿಬ್ಬಂದಿ ಮಹೇಶ್, ವಲನಪಾಲಕರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ – ಕೂಡಲಿಯಲ್ಲಿ ಈಜಲು ಹೋದ ವಿದ್ಯಾರ್ಥಿ ನೀರು ಪಾಲು

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment