ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 10 ಮಾರ್ಚ್ 2019
ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಟಿಕೆಟ್ ನೀಡಬೇಕು ಅನ್ನುವ ಒತ್ತಾಯ ಶುರುವಾಗಿದೆ. ಸಾಗರದಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಪರಮೇಶ್ವರ ದೂಗೂರು, ಕಾಗೋಡು ತಿಮ್ಮಪ್ಪ ಅವರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಉಪಚುನಾವಣೆಯಲ್ಲಿ ಮಧು ಬಂಗಾರಪ್ಪ ಅಲ್ಪ ಮತಗಳ ಅಂತರದಿಂದ ಸೋಲನುಭವಿಸಿದ್ದರು. ಆ ಬಳಿಕ ಮಧು ಬಂಗಾರಪ್ಪ ಜಿಲ್ಲೆಯ ಜನರೊಂದಿಗೆ ಸಂಪರ್ಕದಲ್ಲಲಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಜನ ಜೆಡಿಎಸ್ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಾಗೋಡು ತಿಮ್ಮಪ್ಪ ಅವರನ್ನು ಕಣಕ್ಕಿಳಿಸಬೇಕು ಎಂದು ಅಭಿಪ್ರಾಯ ಪಡುತ್ತಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು, ಕ್ಷೇತ್ರದಲ್ಲಿ ಹಗಲಿರುಳು ಓಡಾಡಿ ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಗೋಡು ತಿಮ್ಮಪ್ಪ ಅವರಿಗೆ ಟಿಕೆಟ್ ನೀಡಬೇಕು ಎಂದು ಪರಮೇಶ್ವರ್ ದೂಗೂರು ಒತ್ತಾಯಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು





