ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 29 JUNE 2023
BYKODU : ನಡುರಾತ್ರಿ ಮನೆಯೊಳಗೆ ನುಗ್ಗಿದ ಹುಲಿಯೊಂದು ಮಲಗಿದ್ದ ವ್ಯಕ್ತಿಯೊಬ್ಬರ ಮೇಲೆ ದಾಳಿ (Tiger Attack) ನಡೆಸಿದೆ. ಗಾಯಾಳುವನ್ನು ಕುಂದಾಪುರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬ್ಯಾಕೋಡು ಸಮೀಪದ ಎಸ್.ಎಸ್.ಬೋಗ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಮರಾಠಿ ಗ್ರಾಮದ ಕಂಚಿಕೇರಿ ಗಣೇಶ್ (47) ಎಂಬುವವರ ಮೇಲೆ ಹುಲಿ ದಾಳಿ ಮಾಡಿದೆ. ಬುಧವಾರ ಮಧ್ಯರಾತ್ರಿ ಸುಮಾರು 2 ಗಂಟೆ ಹೊತ್ತಿಗೆ ಹುಲಿ ಮನೆಯೊಳಗೆ ನುಗ್ಗಿದೆ. ನಿದ್ರೆಯಲ್ಲಿದ್ದ ಗಣೇಶ್ ಮೇಲೆ ದಾಳಿ (Tiger Attack) ನಡೆಸಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಚುರುಕು, ಕಳೆದ 24 ಗಂಟೆಯಲ್ಲಿ ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?
ಗಣೇಶ್ ತಮ್ಮ ಹೆಂಡತಿ ಮತ್ತು ಮಕ್ಕಳೊಂದಿಗೆ ಗುಡಿಸಲು ಮನೆಯಲ್ಲಿ ವಾಸವಿದ್ದರು. ಹುಲಿ ದಾಳಿ ನೆಡೆಸಿದಾಗ ಜೋರಾಗಿ ಕೂಗಿಕೊಂಡಿದ್ದಾರೆ. ಕೂಗಾಟ ಕೇಳಿ ಊರಿನವರು ಸ್ಥಳಕ್ಕೆ ಧಾವಿಸಿದ್ದಾರೆ. ಈ ಹೊತ್ತಿಗಾಗಲೆ ಹುಲಿ ಅಲ್ಲಿಂದ ಪರಾರಿಯಾಗಿತ್ತು. ಗಣೇಶ್ ಅವರ ಬಲಗೈಗೆ ಗಂಭೀರ ಗಾಯವಾಗಿದೆ. ಅವರನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಕೂಡಲೆ ಅರಣ್ಯ ಅಧಿಕಾರಿಗಳು ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





