ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SAGARA, 9 AUGUST 2024 : ಆವಿನಹಳ್ಳಿ ಬಳಿ ಬೈಕ್ ಮತ್ತು ಟಿಪ್ಪರ್ (Tipper) ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಒಬ್ಬ ಯುವಕ ಸಾವನ್ನಪ್ಪಿದ್ದಾನೆ. ಮತ್ತೊಬ್ಬ ಗಂಭೀರ ಗಾಯಗೊಂಡಿದ್ದು ಕುಂದಾಪುರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಕಟ್ಟಿನಕಾರು ಗ್ರಾಮದ ಸಚಿನ್ (19) ಮೃತ ದುರ್ದೈವಿ. ಬೈಕ್ ಚಲಾಯಿಸುತ್ತಿದ್ದ ಸುಮಂತ್ ಗಂಭೀರ ಗಾಯೊಂಡಿದ್ದಾನೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಹೇಗಾಯ್ತು ಅಪಘಾತ?
ಸಾಗರದಿಂದ ಗೆಣಸಿನಕುಣಿ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ಮತ್ತು ಕಟ್ಟಿನಕಾರು ಸಮೀಪದ ಪಡಬೀಡು ಗ್ರಾಮದಿಂದ ಸಾಗರಕ್ಕೆ ತೆರಳುತ್ತಿದ್ದ ಬೈಕ್ ಮಧ್ಯೆ ಅಪಘಾತವಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಸಚಿನ್‌ರನ್ನು ಕೂಡಲೆ ಆಂಬುಲೆನ್ಸ್‌ನಲ್ಲಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸಚಿನ್ ಮೃತಪಟಿದ್ದಾನೆ.
ಇದನ್ನೂ ಓದಿ ⇒ ಪೂಜೆಗೆಂದು ಅರ್ಚಕರು ಬೆಳಗ್ಗೆ ದೇಗುಲಕ್ಕೆ ಬಂದಾಗ ಕಾದಿತ್ತು ಆಘಾತ
ಗಂಭೀರ ಗಾಯಗೊಂಡಿದ್ದ ಸುಮಂತ್‌ನನ್ನು ಕುಂದಾಪುರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.