ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಕಾಲಮಿತಿಯೊಳಗೆ ಮುಖ್ಯ ದ್ವಾರದ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆ ಜೋಗ ಜಲಪಾತ (Jog Falls) ವೀಕ್ಷಣೆಗೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶ ನಿರ್ಬಂಧವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
ಜೋಗ ಜಲಪಾತದಲ್ಲಿ (Jog Falls) ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಸಲಾಗುತ್ತಿದೆ. ಮುಖ್ಯದ್ವಾರದ ಕಾಮಗಾರಿ ಹಿನ್ನೆಲೆ ಸುರಕ್ಷತೆ ದೃಷ್ಟಿಯಿಂದ ಜ.1 ರಿಂದ ಮಾ.15ರವರೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿತ್ತು. ಆದರೆ ಕಾಲಮಿತಿಯೊಳಗೆ ಮುಖ್ಯದ್ವಾರದ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆ ಏಪ್ರಿಲ್ 30ರವರೆಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣ ಅಧಿಕಾರಿ ಗುರುದತ್ತ ಹೆಗಡೆ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182-251444 ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ » ದುರ್ಗಿಗುಡಿಯಲ್ಲಿ ವಿಜೃಂಭಣೆಯ ರಥೋತ್ಸವ, ರಣ ಬಿಸಿಲಲ್ಲೂ ಸೇರಿದ್ದರು ದೊಡ್ಡ ಸಂಖ್ಯೆಯ ಜನ
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






