ಜೋಗ ಜಲಪಾತ, ಪ್ರವಾಸಿಗರಿಗೆ ಮತ್ತೆ ನಿಷೇಧ, ಎಷ್ಟು ದಿನ? ಕಾರಣವೇನು?

ಶಿವಮೊಗ್ಗ : ಕಾಲಮಿತಿಯೊಳಗೆ ಮುಖ್ಯ ದ್ವಾರದ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆ ಜೋಗ ಜಲಪಾತ (Jog Falls) ವೀಕ್ಷಣೆಗೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶ ನಿರ್ಬಂಧವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಜೋಗ ಜಲಪಾತದಲ್ಲಿ (Jog Falls) ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಸಲಾಗುತ್ತಿದೆ. ಮುಖ್ಯದ್ವಾರದ ಕಾಮಗಾರಿ ಹಿನ್ನೆಲೆ ಸುರಕ್ಷತೆ ದೃಷ್ಟಿಯಿಂದ ಜ.1 ರಿಂದ ಮಾ.15ರವರೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿತ್ತು. ಆದರೆ ಕಾಲಮಿತಿಯೊಳಗೆ ಮುಖ್ಯದ್ವಾರದ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆ ಏಪ್ರಿಲ್‌ 30ರವರೆಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. 

NFC-Chicken-Kabab

ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣ ಅಧಿಕಾರಿ ಗುರುದತ್ತ ಹೆಗಡೆ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182-251444 ಸಂಪರ್ಕಿಸಬಹುದಾಗಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ದುರ್ಗಿಗುಡಿಯಲ್ಲಿ ವಿಜೃಂಭಣೆಯ ರಥೋತ್ಸವ, ರಣ ಬಿಸಿಲಲ್ಲೂ ಸೇರಿದ್ದರು ದೊಡ್ಡ ಸಂಖ್ಯೆಯ ಜನ

Leave a Comment