SHIVAMOGGA LIVE NEWS, 16 DECEMBER 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ : ಜೋಗ ಜಲಪಾತದಲ್ಲಿ (Jog Falls) ವಿವಿಧ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಮೂರು ತಿಂಗಳು ಜಲಪಾತಕ್ಕೆ ಪ್ರವಾಸಿಗರ ಭೇಟಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಮತ್ತು ಜೋಗ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಆದೇಶಿಸಿದ್ದಾರೆ.
ಸಾಗರ ತಾಲ್ಲೂಕಿನ ಜೋಗ ಜಲಪಾತದ ಮುಖ್ಯದ್ವಾರ ಮತ್ತು ಪ್ರವಾಸಿಗರಿಗೆ ಮೂಲ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಆದ್ದರಿಂದ ಜನವರಿ 1 ರಿಂದ ಮಾರ್ಚ್ 15ರ ವರೆಗೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶ ನಿರ್ಭಂದಿಸಲಾಗಿದೆ.

ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆ ಆಗಬಾರದು ಎಂದು ಪ್ರವೇಶ ನಿರ್ಭಂದಿಸಲಾಗಿದೆ. ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182-251444 ನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.
ಇದನ್ನೂ ಓದಿ » ಬಸ್ ಪಲ್ಟಿ, ಸಾಗರದಲ್ಲಿ ಯಾರೆಲ್ಲ ಹೇಗೆಲ್ಲ ನೆರವಾದರು? ಇಲ್ಲಿದೆ ಡಿಟೇಲ್ಸ್
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






