ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 18 JUNE 2021
ಶರಾವತಿ ಹಿನ್ನೀರು ಭಾಗದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಜೋಗ ಜಲಪಾತ ಮೈದುಂಬಿ ಧುಮ್ಮಿಕ್ಕುತ್ತಿದೆ. ಆದರೆ ಕೋವಿಡ್ ಲಾಕ್ ಡೌನ್ ಕಾರಣ ಪ್ರವಾಸಿಗರಿಗೆ ಜಲಪಾತ ವೀಕ್ಷಣೆಯನ್ನು ನಿರ್ಬಂಧಿಸಲಾಗಿದೆ.
ಜಲಪಾತದ ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಹಾಗಾಗಿ ರಾಜ, ರಾಣಿ, ರೋರರ್, ರಾಕೆಟ್ ಜಲಪಾತಗಳು ಕಳೆಗಟ್ಟಿವೆ. ಜೋರು ಮಳೆ, ದಟ್ಟ ಇಬ್ಬನಿಯ ನಡುವೆ ಜೋಗದ ವೈಭವ ಕಣ್ತುಂಬಿಕೊಳ್ಳುವುದು ಕಣ್ಣಿಗೆ ಸಡಗರವಾಗಿದೆ.
ಸಾರ್ವಜನಿಕರಿಗೆ ಎಂಟ್ರಿ ಇಲ್ಲ
ಜೋಗ ಜಲಪಾತ ಕಣ್ತುಂಬಿಕೊಳ್ಳಲು ಇದು ಒಳ್ಳೆಯ ಸಮಯ. ಬೆಂಗಳೂರು ಸೇರಿದಂತೆ ದೂರದ ಊರುಗಳಿಂದ ಜೋಗಕ್ಕೆ ದೊಡ್ಡ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದರು. ಪ್ರತಿ ಮಳೆಗಾಲದಲ್ಲಿ ವೀಕೆಂಡ್ ಸಂದರ್ಭ ಜೋಗ ನೋಡಲು ಬರುವ ಜನರು ಗಂಟೆಗಟ್ಟಲೆ ಕ್ಯೂ ನಿಂತು ಜಲಪಾತ ವೀಕ್ಷಿಸುತ್ತಿದ್ದರು. ಆದರೆ ಈ ಬಾರಿ ಕೋವಿಡ್ ಮತ್ತು ಲಾಕ್ ಡೌನ್ನಿಂದಾಗಿ ಜೋಗ ಜಲಾಪತ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ.
ವೈರಲ್ ವಿಡಿಯೋದಲ್ಲಿ ಹಳೆಯ ಜೋಗ
ಶರಾವತಿ ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದಂತೆ ಜೋಗ ಜಲಪಾತ ಭೋರ್ಗರೆಯುತ್ತಿದೆ ಎಂದು ನಕಲಿ ವಿಡಿಯೋ, ಫೋಟೋಗಳನ್ನು ಷೇರ್ ಮಾಡಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಜಿಲ್ಲೆ ಮತ್ತು ಅಕ್ಕಪಕ್ಕದ ಜಿಲ್ಲೆಯ ಪ್ರವಾಸಿಗರು ಜೋಗಕ್ಕೆ ಭೇಟಿ ನೀಡುತ್ತಿದ್ದಾರೆ. ಆದರೆ ಗೇಟ್ವರೆಗೂ ಬಂದು ನಿರಾಸೆಯಿಂದ ಹಿಂತಿರುಗುತ್ತಿದ್ದಾರೆ. ಕೆಲವರು ತಮ್ಮನ್ನು ಒಳಗೆ ಬಿಡುವಂತೆ ಸೆಕ್ಯೂರಿಟಿಗಳ ಜೊತೆಗೆ ಜಗಳವಾಡುತ್ತಿದ್ದಾರೆ.
ಶರಾವತಿ ಕಣಿವೆಯಲ್ಲಿ ಭಾರಿ ಮಳೆ
ಹೊಸನಗರ ತಾಲೂಕಿನಲ್ಲಿ ಕಳೆದ ಎರಡು ದಿನದಿಂದ 300 ಮಿ.ಮೀ ನಷ್ಟು ಮಳೆಯಾಗುತ್ತಿದೆ. ಇದರಿಂದ ಶರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಲಿಂಗನಮಕ್ಕಿ ಜಲಾಶಯಕ್ಕೆ 45 ಸಾವಿರ ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಜಲಾಶಯ ಭರ್ತಿಯಾಗಿ, ಭಾರಿ ಪ್ರಮಾಣದಲ್ಲಿ ನೀರು ಹೊರಗೆ ಬಿಟ್ಟರಷ್ಟೆ ಈಗ ವೈರಲ್ ಆಗಿರುವ ವಿಡಿಯೋದಲ್ಲಿ ಇರುವಂತೆ ಜೋಗದಲ್ಲಿ ನೀರು ಹರಿಯಲಿದೆ.
ಕರೋನಾದ ಕಠಿಣ ರೂಲ್ಸ್ ಮುಂದುವರೆದರೆ ಈ ಬಾರಿ ಸಾರ್ವಜನಿಕರಿಗೆ ಜೋಗ ಜಲಪಾತದ ವೀಕ್ಷಣೆಗೆ ಅಸಾದ್ಯವಾಗಲಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422