ಶಿವಮೊಗ್ಗ ಲೈವ್.ಕಾಂ | SAGARA NEWS | 9 ಜುಲೈ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಜೋಗ ಜಲಪಾತ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಪ್ರವಾಸಿಗರ ಸಂಖ್ಯೆ ಕ್ಷೀಣಿಸಿದೆ. ವೀಕೆಂಡ್‍ನಲ್ಲಿ ಹೆಚ್ಚಿನ ಪ್ರವಾಸಿಗರು ಜೋಗಕ್ಕೆ ಬರುವ ನಿರೀಕ್ಷೆ ಇದೆ.
ಜಲಪಾತದ ಹಿನ್ನೀರು ಭಾಗದಲ್ಲಿ ಮಳೆಯಾಗುತ್ತಿದೆ. ಹಾಗಾಗಿ ಜೋಗ ಜಲಪಾತದ ರಾಜಾ, ರಾಣಿ, ರೋರರ್, ರಾಕೆಟ್ ಜಲಪಾತಗಳು ಧುಮ್ಮಿಕ್ಕುತ್ತಿವೆ. ಇದು ನಯನ ಮನೋಹರ ದೃಶ್ಯವಾಗಿದೆ.
ಲಾಕ್‍ಡೌನ್ ಬಳಿಕ ಆರಂಭಿಕ ಉತ್ಸಾಹ
ಲಾಕ್ ಡೌನ್ ಹಿನ್ನೆಲೆ ಜೋಗ ಜಲಪಾತಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿತ್ತು. ಆದರೆ ಲಾಕ್ ಡೌನ್‍ಗೆ ರಿಲೀಫ್ ಸಿಗುತ್ತಿದ್ದಂತೆ ಆರಂಭದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಲಪಾತ ವೀಕ್ಷಣೆಗೆ ಬಂದಿದ್ದರು. ಆ ಬಳಿಕ ಪ್ರವಾಸಿಗರ ಸಂಖ್ಯೆ ಕ್ಷೀಣಿಸಿದೆ. ಸಾಮಾನ್ಯವಾಗಿ ಈ ಹೊತ್ತಿನಲ್ಲಿ ಹೆಚ್ಚಿನ ಪ್ರವಾಸಿಗರು ಜೋಗಕ್ಕೆ ಬರುತ್ತಿದ್ದರು, ಇಲ್ಲಿ ಫೋಟೊ ಕ್ಲಿಕ್ಕಿಸಿಕೊಂಡು ಸಂಭ್ರಮಿಸುತ್ತಿದ್ದರು.
ವೀಕೆಂಡ್‍ನಲ್ಲಿ ಪ್ರವಾಸಿಗರ ನಿರೀಕ್ಷೆ
ಈ ಬಾರಿ ವೀಕೆಂಡ್ ಕರ್ಫ್ಯೂ ಇಲ್ಲ. ಜೋಗ ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ. ಎರಡನೆ ಶನಿವಾರ ಮತ್ತು ಭಾನುವಾರ ಇರುವ ಕಾರಣ ಈ ವೀಕೆಂಡ್‍ನಲ್ಲಿ ದೊಡ್ಡ ಸಂಖ್ಯೆಯ ಪ್ರವಾಸಿಗರು ಜೋಗಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಜೋಗ ಜಲಪಾತ ವೀಕ್ಷಣೆಗೆ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಕೋವಿಡ್ ನಿಯಮ ಪಾಲಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಸೂಚಿಸಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






