ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಸಾಗರ: ಜೋಗ ನಿರ್ವಹಣೆ ಪ್ರಾಧಿಕಾರವು ಜೋಗ ಜಲಪಾತ (Jog Falls) ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದೆ. ಮೊದಲ ದಿನವೇ ದೊಡ್ಡ ಸಂಖ್ಯೆಯ ಪ್ರವಾಸಿಗರು ಜಲಪಾತ ಕಣ್ತುಂಬಿಕೊಂಡರು.
ಇದನ್ನೂ ಓದಿ » ಯುವತಿಯ ಫೇಸ್‌ಬುಕ್ ರಿಕ್ವೆಸ್ಟ್ ಒಪ್ಪಿದ ಶಿವಮೊಗ್ಗದ ಉದ್ಯಮಿಗೆ ಮುಂದೆ ಕಾದಿತ್ತು ಶಾಕ್
ಜೋಗ ಜಲಪಾತದ ಮುಖ್ಯ ದ್ವಾರ ನಿರ್ಮಾಣ ಕಾಮಗಾರಿ ಹಿನ್ನೆಲೆ ಜಲಪಾತ (Jog Falls) ವೀಕ್ಷಣೆಗೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ನಾಲ್ಕು ತಿಂಗಳ ಬಳಿಕ ಜಲಪಾತ ವೀಕ್ಷಣೆಗೆ ನಿರ್ಬಂಧ ತೆರವುಗೊಳಿಸಲಾಗಿದೆ. ಮೇ 1ರಿಂದ ಜೋಗ ಪ್ರವೇಶಕ್ಕೆ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ.
ಮೊದಲ ದಿನವೇ ಜನವೋ ಜನ
ಜೋಗ ಜಲಪಾತ ವೀಕ್ಷಣೆಗೆ ಗುರುವಾರ ದೊಡ್ಡ ಸಂಖ್ಯೆಯ ಪ್ರವಾಸಿಗರು ಆಗಮಿಸಿದ್ದರು. ಸಾಗರ, ಶಿವಮೊಗ್ಗ, ಬೆಂಗಳೂರು ಸೇರಿದಂತೆ ವಿವಿಧೆಡೆಯ ಪ್ರವಾಸಿಗರು ಜೋಗ ಜಲಪಾತಕ್ಕೆ ಆಗಮಿಸಿದ್ದರು. ಜಲಪಾತದ ವೈಭವ ಕಣ್ತುಂಬಿಕೊಂಡು, ಫೋಟೊ, ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು.

183 ಕೋಟಿ ರೂ. ವೆಚ್ಚದಲ್ಲಿ ಜೋಗ ಜಲಪಾತದ ಅಭಿವೃದ್ಧಿ ಕಾರ್ಯ ನಡೆಸಲಾಗುತ್ತಿದೆ. ಇನ್ನು ಕಾಮಗಾರಿ ಮುಂದುವರೆದಿದೆ.








