ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | 1 ಜನವರಿ 2019
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ದಿನೇ ದಿನೇ ಮಲೆನಾಡಿನಲ್ಲಿ ಮಂಗನ ಕಾಯಿಲೆ ಆತಂಕ ಹೆಚ್ಚಾಗುತ್ತಿದೆ. ಈ ನಡುವೆ ಶರಾವತಿ ಕಣಿವೆ ಅಭಯಾಯರಣ್ಯದ ಮುಪ್ಪಾನೆ ಪ್ರಕೃತಿ ಶಿಬಿರ ಅರಣ್ಯ ವ್ಯಾಪ್ತಿಯಲ್ಲಿ, ಚಾರಣಕ್ಕೆ ನಿರ್ಬಂಧ ವಿಧಿಸಲಾಗಿದೆ.
ಜಿಲ್ಲಾ ವನ್ಯಜೀವಿ ವಿಭಾಗದ ವತಿಯಿಂದ ಈ ಆದೇಶ ಹೊರಡಿಸಲಾಗಿದೆ. ಮುಪ್ಪಾನೆ ಭಾಗದಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿರುವ ಹಿನ್ನೆಲೆ, ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ. ಆದರೆ ಸಾರ್ವಜನಿಕರ ಹಿತದೃಷ್ಟಿಯಿಂದ ಜ.1ರಿಂದ ಮುಂದಿನ ಆದೇಶದವರೆಗೂ ಚಾರಣಕ್ಕೆ ನಿರ್ಬಂಧ ವಿಧಿಸಲಾಗಿದೆ.
ಸದ್ಯದಲ್ಲೇ ಸಿಗಂದೂರು ಭಕ್ತರಿಗೂ ಮಾರ್ಗಸೂಚಿ
ಇನ್ನು, ಸಿಗಂದೂರು ಚೌಡೇಶ್ವರಿ ಸನ್ನಿಧಿಗೆ ತೆರಳುವ ಭಕ್ತರಿಗೆ, ಮಾರ್ಗಸೂಚಿ ಬಿಡುಗಡೆ ಮಾಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯೋಜಿಸಿದೆ. ಸಂಕ್ರಾಂತಿ ಸಂದರ್ಭ, ಸಿಗಂದೂರಿಗೆ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ದೇವಸ್ಥಾನಕ್ಕೆ ತೆರಳುವ ಭಕ್ತರು, ಲಾಂಚ್ ಹತ್ತುವ ಹಸಿರುಮಕ್ಕಿ ಭಾಗದಲ್ಲಿ, ಮಂಗಗಳು ಅಸಹಜವಾಗಿ ಸಾವನ್ನಪ್ಪಿವೆ. ಈ ಭಾಗದಲ್ಲಿ ಪರಿಶೀಲನೆ ನಡೆಸಿದಾಗ ಮಂಗನ ಕಾಯಿಲೆ ಇರುವ ಕುರಿತು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಭಕ್ತರಿಗೆ ಮಾರ್ಗಸೂಚಿ ಬಿಡುಗಡೆ ಮಾಡಲು ಯೋಜಿಸಲಾಗಿದೆ.
ಭಕ್ತರು ಯಾವುದೇ ಕಾರಣಕ್ಕೂ ಅರಣ್ಯ ಪ್ರದೇಶದ ಒಳಗೆ ತೆರಳದಂತೆ ಸುಚಿಸಲಾಗುತ್ತಿದೆ. ಅಷ್ಟೇ ಅಲ್ಲ, ಶೀಘ್ರವೇ ಪ್ರವಾಸಿಗರಲ್ಲಿ ಮಂಗನ ಕಾಯಿಲೆ ಕುರಿತು ಜಾಗೃತಿ ಮೂಡಿಸುವ ಕರಪತ್ರಗಳನ್ನು ಹಂಚಲು ತೀರ್ಮಾನಿಸಲಾಗಿದೆ.
- ಬಾಳೆಬರೆಯಲ್ಲಿ ಕ್ಯಾಂಟರ್ ಪಲ್ಟಿ, ಧರ್ಮದರ್ಶಿಯ ಕಾರು ಜಖಂ
- ಬೆಂಬಲ ಬೆಲೆಗೆ ಭತ್ತ ಖರೀದಿ, ನ.15ರಿಂದ ರೈತರ ಹೆಸರು ನೋಂದಣಿ
- ಹೆದ್ದಾರಿಯಲ್ಲಿ ಗುಂಡಿ ಮುಚ್ಚಿದ ಸಂಸದ, ಗಮನ ಸೆಳೆದ JNNCE ಆವಿಷ್ಕಾರ
- ಅಡಿಕೆ ಧಾರಣೆ | 14 ನವೆಂಬರ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಸಿಗಂದೂರು ಬಳಿ ಹಿನ್ನೀರಿನಲ್ಲಿ ಮೂವರು ಯುವಕರ ಮೃತದೇಹ ಪತ್ತೆ
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494ಈ ಮೇಲ್ | [email protected]