SHIVAMOGGA LIVE NEWS | TRAFFIC| 08 ಮೇ 2022
ಸಾಗರದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಇದಕ್ಕೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಜವಳಿ ವರ್ತಕರ ಸಂಘದ ವತಿಯಿಂದ ಪೊಲೀಸ್ ಉಪ ಅಧೀಕ್ಷಕರಿಗೆ ಮನವಿ ಸಲ್ಲಿಸಿದರು.
ಸಾಗರ ಪಟ್ಟಣದಲ್ಲಿ ದಿನೇ ದಿನೆ ಟ್ರಾಫಿಕ್ ಸಮಸ್ಯೆ ಹೆಚ್ಚಳವಾಗುತ್ತಿದೆ. ಇದರಿಂದ ವರ್ತಕರು ಮತ್ತು ಗ್ರಾಹಕರಿಗೆ ತೀವ್ರ ಸಮಸ್ಯೆ ಉಂಟಾಗುತ್ತಿದೆ. ಆದ್ದರಿಂದ ಟ್ರಾಫಿಕ್ ಸಮಸ್ಯೆಗೆ ಪರಿಹಾರ ನೀಡಬೇಕು ಎಂದು ವರ್ತಕರು ಆಗ್ರಹಿಸಿದರು.
ಪಟ್ಟಣದ ಜೆ.ಸಿ.ರಸ್ತೆ, ಮಾರ್ಕೆಟ್ ರಸ್ತೆ, ಸೊರಬ ರಸ್ತೆ, ಅಶೋಕ ರಸ್ತೆ ಸಂಚಾರ ದಟ್ಟಣೆ ಹೆಚ್ಚಳವಾಗಿದೆ. ಇದಕ್ಕೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು. ಪ್ರಮುಖರಾದ ಮಲ್ಲಿಕಾರ್ಜುನ, ಗಣಪತಿ ಸುಳಗೋಡು, ಸುರೇಶ್, ಚಂದ್ರಶೇಖರ್, ಸೀತಾರಾಂ, ಅಶೋಕ್ ಗುಜ್ಜಾರ್, ನಂದ ಕುಮಾರ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಅನಂದಪುರ ಬಳಿ ಕೆರೆಗೆ ಉರುಳಿದ ಟಿಪ್ಪರ್ ಲಾರಿ, ಅದೃಷ್ಟವಶಾತ್ ತಪ್ಪಿತು ದುರಂತ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200