ಸಾಗರ – ಸಿಗಂದೂರು ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್‌ ಮರ

SHIVAMOGGA LIVE NEWS | 13 JULY 2024

SAGARA : ಚಲಿಸುತ್ತಿದ್ದ ಕಾರಿನ ಮೇಲೆ ಮರ (Tree) ಬಿದ್ದು ಇಬ್ಬರು ಗಾಯಗೊಂಡಿದ್ದಾರೆ. ಸಾಗರ – ಸಿಗಂದೂರು ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಹುಲ್ಲತ್ತಿ ಗ್ರಾಮದ ಪುನಿತ್‌ ಮತ್ತು ರವಿ ಎಂಬುವವರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದ ತಿಳಿದು ಬಂದಿದೆ. ಗಾಯಾಳುಗಳನ್ನು ಕೂಡಲೆ ಸಾಗರದ ಉಪ ವಿಭಾಗೀಯ ಅಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮರ ಬಿದ್ದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಇನ್ನು, ಮರ ಬಿದ್ದಿದ್ದರಿಂದ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ತೆರವು ಕಾರ್ಯಾಚರಣೆ ಬಳಿಕ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

Tree-fall-in-Sagara-Sigandur-road

ಇದನ್ನೂ ಓದಿ

ಹೊಸ ರೈಲಿಗೆ ಸಂಸದ ರಾಘವೇಂದ್ರ ಹಸಿರು ನಿಶಾನೆ, ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು?

Kalleshwara-Enterprises.webp
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment