ಸಾಗರ: ತಾಲೂಕಿನ ವಿವಿಧೆಡೆ ಭಾರಿ ಮಳೆಯಾಗುತ್ತಿದ್ದು ರಾಷ್ಟ್ರೀಯ ಹೆದ್ದಾರಿ 69ರ ಯಡೆಹಳ್ಳಿ ಪೆಟ್ರೋಲ್ ಬಂಕ್ ಬಳಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಇದರಿಂದ ಶಿವಮೊಗ್ಗ – ಸಾಗರ ನಡುವೆ ವಾಹನ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.
ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ರಸ್ತೆಗೆ ಬಿದ್ದಿರುವ ಮರ ತೆರವು ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಆದ್ದರಿಂದ ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಅನಿವಾರ್ಯವಾಗಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕಿದೆ.

ಸಾಗರ ಕಡೆಯಿಂದ ಶಿವಮೊಗ್ಗಕ್ಕೆ ಪ್ರಯಾಣಿಸುವವರು ರಿಪ್ಪನ್‌ಪೇಟೆ-ಆಯನೂರು ಮಾರ್ಗವಾಗಿ ಸಂಚರಿಸಬೇಕು. ಹಾಗೆಯೇ ಆಯನೂರು ಕಡೆಯಿಂದ ಸಾಗರಕ್ಕೆ ತೆರಳುವ ಪ್ರಯಾಣಿಕರು ಆಯನೂರು-ರಿಪ್ಪನ್‌ಪೇಟೆ-ಆನಂದಪುರ ಮಾರ್ಗವನ್ನು ಬಳಸುವಂತೆ ಆನಂದಪುರ ಪಿಎಸ್‌ಐ ತಿಳಿಸಿದ್ದಾರೆ. ಮರ ತೆರವು ಕಾರ್ಯಾಚರಣೆ ಬಳಿಕ ಈ ಮಾರ್ಗದಲ್ಲಿ ವಾಹನ ಸಂಚಾರ ಪುನಾರಂಭವಾಗಲಿದೆ.
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
