ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಚಾಲಕನ ನಿಯಂತ್ರಣ ತಪ್ಪಿ ಟೆಂಪೊ ಟ್ರಾವಲರ್ ವಾಹನ ಪಲ್ಟಿಯಾಗಿ ಸಿಗಂದೂರು (Sigandur) ದೇವಸ್ಥಾನಕ್ಕೆ ತೆರಳುತ್ತಿದ್ದ ಮಹಿಳೆಯರು ಗಾಯಗೊಂಡಿದ್ದಾರೆ. ಸಾಗರ ತಾಲೂಕು ಕೂರನಕೊಪ್ಪ ಸಮೀಪ ಇಂದು ಬೆಳಗ್ಗೆ ಅಪಘಾತವಾಗಿದೆ.
ಬೆಂಗಳೂರಿನಿಂದ ಆಗಮಿಸಿದ್ದ 12 ಮಹಿಳೆಯರು ಟಿಟಿ ವಾಹನದಲ್ಲಿ ಸಿಗಂದೂರು ದೇವಿ ದರ್ಶನಕ್ಕೆ ತೆರಳುತ್ತಿದ್ದರು. ಕೂರನಕೊಪ್ಪ ಬಳಿ ಚಾಲಕನ ನಿಯಂತ್ರಣ ತಪ್ಪಿದ ಟಿಟಿ ವಾಹನ ರಸ್ತೆ ಬದಿಗೆ ಪಲ್ಟಿಯಾಗಿದೆ. ಗಾಯಾಳುಗಳನ್ನು ಕೂಡಲೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇನ್ನು, ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರಿಂದ ಮೂವರು ಮಹಿಳೆಯರನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ.
ಬೆಂಗಳೂರಿನಿಂದ ಬೆಳಗ್ಗೆ ಬಂದಿದ್ದರು
ಬೆಂಗಳೂರಿನಿಂದ 12 ಮಹಿಳೆಯರು ರೈಲಿನಲ್ಲಿ ಇಂದು ಬೆಳಗ್ಗೆ ಸಾಗರಕ್ಕೆ ಆಗಮಿಸಿದ್ದರು ಎಂದು ತಿಳಿದು ಬಂದಿದೆ. ಟಿಟಿ ವಾಹನ ಬಾಡಿಗೆಗೆ ಪಡೆದು ಸಿಗಂದೂರು ದೇವಿ ದರ್ಶನಕ್ಕೆ ತೆರಳುತ್ತಿದ್ದಾಗ ಅಪಘಾತವಾಗಿದೆ.

ಆಸ್ಪತ್ರೆಗೆ ಎಂಎಲ್‌ಎ ದೌಡು
ಇನ್ನು, ಅಪಘಾತದ ಮಾಹಿತಿ ಲಭ್ಯವಾಗುತ್ತಿದ್ದಂತೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಕಾರ್ಯಕ್ರಮಗಳನ್ನು ಮೊಟಕುಗೊಳಿಸಿ ಆಸ್ಪತ್ರೆಗೆ ದೌಡಾಯಿಸಿದರು. ಗಾಯಾಳುಗಳ ಆರೋಗ್ಯ ವಿಚಾರಿಸಿ, ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದರು. ಅಲ್ಲದೆ ತುರ್ತು ಆಂಬುಲೆನ್ಸ್ ವ್ಯವಸ್ಥೆ ಮಾಡಿ ಗಾಯಾಳುಗಳನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲು ನೆರವಾದರು.

ಸಾಗರದ ಟಿಟಿ ಮಾಡಿಕೊಂಡು ಸಿಗಂದೂರಿಗೆ ಹೊರಟಿದ್ದರು. ಟಿಟಿ ಪಲ್ಟಿಯಾಗಿದೆ. ಕೆಲವರಿಗೆ ತಲೆಗೆ, ಕೈಗೆ, ಕುತ್ತಿಗೆ ಗಾಯವಾಗಿದೆ. ಅವರನ್ನೆಲ್ಲ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ರವಾನಿಸಿದ್ದೇವೆ. ಉಳಿದವರಿಗೆ ಇಲ್ಲಿಯೆ ಚಿಕಿತ್ಸೆ ನಡೆಯುತ್ತಿದೆ. ಯಾರಿಗೂ ಯಾವುದೇ ಸಮಸ್ಯೆ ಆಗಬಾರದು.
- ಬೇಳೂರು ಗೋಪಾಲಕೃಷ್ಣ, ಶಾಸಕ
![]()
ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ »‘ಎಲ್ಲ ಸಮಸ್ಯೆ ಪರಿಹಾರವಾಗಿದೆ, ನಿಗದಿತ ಸಮಯದಲ್ಲೆ ಪೂರ್ಣ ಆಗುತ್ತೆʼ, ಶಿವಮೊಗ್ಗದಲ್ಲಿ ಮಿನಿಸ್ಟರ್ ಏನೆಲ್ಲ ಹೇಳಿದರು?
Sigandur
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





