ಆನಂದಪುರ ಬಳಿ ಬೈಕುಗಳ ಮಧ್ಯೆ ಡಿಕ್ಕಿ, ಒಬ್ಬರಿಗೆ ಗಂಭೀರ ಗಾಯ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 14 MARCH 2024

SAGARA : ಆನಂದಪುರ ಸಮೀಪದ ಗೌರಿಕೆರೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಆನಂದಪುರದಿಂದ ಆಡೂರಿಗೆ ಹೋಗುತ್ತಿದ್ದ ಬೈಕ್ ಹಾಗೂ ಯಡೇಹಳ್ಳಿಯಿಂದ ಆನಂದಪುರದ ಕಡೆ ಬರುತ್ತಿದ್ದ ಬೈಕ್ ನಡುವೆ ಡಿಕ್ಕಿಯಾಗಿದೆ.

ಸತ್ಯನಾರಾಯಣ ಎಂಬುವವರಿಗೆ ತೀವ್ರ ಗಾಯವಾಗಿದೆ. ಆನಂದಪುರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನೂ ಶಿವಮೊಗ್ಗದ ಆಸ್ಪತ್ರೆಗೆ ಕಳುಹಿಸಲಾಗಿದೆ. ಆನಂದಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ – ಆಗುಂಬೆಯಲ್ಲಿ ಟೀ ಕುಡಿದು ಬಸ್‌ ಹತ್ತಿದ ಪ್ರಯಾಣಿಕನಿಗೆ ಕಾದಿತ್ತು ಆಘಾತ, ವಿಷಯ ತಿಳಿದು ಶಿವಮೊಗ್ಗದ ವ್ಯಕ್ತಿ ಸ್ಥಳಕ್ಕೆ ದೌಡು

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment