ಚೆಕ್‌ಪೋಸ್ಟ್‌ನಲ್ಲಿ ಕಾರು ತಪಾಸಣೆ ವೇಳೆ ಎರಡು ಕೋಟಿ ಪತ್ತೆ, ಹಣ ಸೀಜ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 21 ಮಾರ್ಚ್ 2019

ಚೆಕ್‌ಪೋಸ್ಟ್ ಒಂದರಲ್ಲಿ ಕಾರು ತಪಾಸಣೆ ವೇಳೆ ಎರಡು ಕೋಟಿ ರೂಪಾಯಿ ಹಣ ಪತ್ತೆಯಾಗಿದೆ. ಪರಿಶೀಲನೆ ನಡೆಸಿದ ಅಧಿಕಾರಿಗಳು ಹಣವನ್ನು ಆದಾಯ ತೆರಿಗೆ ಇಲಾಖೆ ವಶಕ್ಕೆ ಒಪ್ಪಿಸಲಾಗಿದೆ.

ಸಾಗರ ತಾಲೂಕಿನ ಅಮಟೆಕೊಪ್ಪ ಬಳಿ ಚೆಕ್‌ಪೋಸ್ಟ್‌ನಲ್ಲಿ ಚುನಾವಣಾ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಚೆಕ್‌‌ಪೋಸ್ಟ್‌ಗೆ ಬಂದ ಎರ್ಟಿಗಾ ಕಾರು ತಪಾಸಣೆ ನಡೆಸಿದಾಗ ಎರಡು ಕೋಟಿ ರೂ. ಹಣ ಪತ್ತೆಯಾಗಿದೆ.

ಹಣ ಯಾರಿಗೆ ಸೇರಿದ್ದು?

ಕಾರಿನಲ್ಲಿದ್ದ ಎರಡು ಕೋಟಿ ರೂ. ಹಣ ಪ್ರಗತಿ ಗ್ರಾಮೀಣ ಬ್ಯಾಂಕ್‌ಗೆ ಸೇರಿದೆ ಎಂದು ತಿಳಿದು ಬಂದಿದೆ. ಬ್ಯಾಂಕಿನ ಅಸಿಸ್ಟೆಂಟ್ ಮ್ಯಾನೇಜರ್ ಹಣ ಕಾರಿನಲ್ಲಿ ಸಾಗಿಸುತ್ತಿದ್ದರು. ಆದರೆ ಸಮರ್ಪಕ ದಾಖಲೆ ಇಲ್ಲದಿರುವುದರಿಂದ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಹಣವನ್ನು ವಶಕ್ಕೆ ಪಡೆದು, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.‌

ಸಾಗರ ಉಪವಿಭಾಗಾಧಿಕಾರಿ ದರ್ಶನ್, ಸಹಾಯಕ ಪೊಲೀಸ್ ಅಧೀಕ್ಷಕ ಯತೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ | 7411700200

ಸುದ್ದಿಗಾಗಿ ಕರೆ ಮಾಡಿ | 9964634494

ಮೇಲ್ ಮಾಡಲು | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment