ಶಿವಮೊಗ್ಗ ಲೈವ್.ಕಾಂ | 21 ಮಾರ್ಚ್ 2019
ಚೆಕ್ಪೋಸ್ಟ್ ಒಂದರಲ್ಲಿ ಕಾರು ತಪಾಸಣೆ ವೇಳೆ ಎರಡು ಕೋಟಿ ರೂಪಾಯಿ ಹಣ ಪತ್ತೆಯಾಗಿದೆ. ಪರಿಶೀಲನೆ ನಡೆಸಿದ ಅಧಿಕಾರಿಗಳು ಹಣವನ್ನು ಆದಾಯ ತೆರಿಗೆ ಇಲಾಖೆ ವಶಕ್ಕೆ ಒಪ್ಪಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಾಗರ ತಾಲೂಕಿನ ಅಮಟೆಕೊಪ್ಪ ಬಳಿ ಚೆಕ್ಪೋಸ್ಟ್ನಲ್ಲಿ ಚುನಾವಣಾ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಚೆಕ್ಪೋಸ್ಟ್ಗೆ ಬಂದ ಎರ್ಟಿಗಾ ಕಾರು ತಪಾಸಣೆ ನಡೆಸಿದಾಗ ಎರಡು ಕೋಟಿ ರೂ. ಹಣ ಪತ್ತೆಯಾಗಿದೆ.
ಹಣ ಯಾರಿಗೆ ಸೇರಿದ್ದು?
ಕಾರಿನಲ್ಲಿದ್ದ ಎರಡು ಕೋಟಿ ರೂ. ಹಣ ಪ್ರಗತಿ ಗ್ರಾಮೀಣ ಬ್ಯಾಂಕ್ಗೆ ಸೇರಿದೆ ಎಂದು ತಿಳಿದು ಬಂದಿದೆ. ಬ್ಯಾಂಕಿನ ಅಸಿಸ್ಟೆಂಟ್ ಮ್ಯಾನೇಜರ್ ಹಣ ಕಾರಿನಲ್ಲಿ ಸಾಗಿಸುತ್ತಿದ್ದರು. ಆದರೆ ಸಮರ್ಪಕ ದಾಖಲೆ ಇಲ್ಲದಿರುವುದರಿಂದ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಹಣವನ್ನು ವಶಕ್ಕೆ ಪಡೆದು, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.
ಸಾಗರ ಉಪವಿಭಾಗಾಧಿಕಾರಿ ದರ್ಶನ್, ಸಹಾಯಕ ಪೊಲೀಸ್ ಅಧೀಕ್ಷಕ ಯತೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಮೇಲ್ ಮಾಡಲು | [email protected]