ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
SHIVAMOGGA LIVE NEWS, 18 JANUARY 2025
ಶಿವಮೊಗ್ಗ : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಒಂದೇ ದಿನ ಎರಡು ವಿಶ್ವವಿದ್ಯಾಲಯಗಳಿಂದ, ಎರಡು ಪ್ರತ್ಯೇಕ ಗೌರವ ಡಾಕ್ಟರೇಟ್ (Doctorate) ಪ್ರದಾನ ಮಾಡಲಾಗುತ್ತಿದೆ.
ಕಾಗೋಡು ತಿಮ್ಮಪ್ಪ ಅವರಿಗೆ ಕುವೆಂಪು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ. ಇನ್ನೊಂದೆಡೆ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿವಿಯಿಂದಲು ಗೌರವ ಡಾಕ್ಟರೇಟ್ ಘೋಷಿಸಲಾಗಿದೆ.
ಜ.22ರಂದು ಎರಡು ಡಾಕ್ಟರೇಟ್ ಜ.22ರಂದು ಬೆಳಗ್ಗೆ 10.30ಕ್ಕೆ ಶಂಕರಘಟ್ಟದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವ ನಡೆಯಲಿದೆ. ಅಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಭೌತವಿಜ್ಞಾನಿ ಮುಂಬೈನ ಸಿ.ಎಸ್.ಉನ್ನಿಕೃಷ್ಣನ್, ಯೋಗಗುರು ಭದ್ರಾವತಿಯ ಡಿ.ನಾಗರಾಜ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ. ಜ.22ರಂದ ಮಧ್ಯಾಹ್ನ 2 ಗಂಟೆಗೆ ಸಾಗರ ತಾಲೂಕು ಇರುವಕ್ಕಿಯಲ್ಲಿರುವ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ 9ನೇ ಘಟಿಕೋತ್ಸವ ನಡೆಯಲಿದೆ. ಅಲ್ಲಿಯು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ.
ಈಗಾಗಲೆ ಎರಡು ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಸಾಗರದಲ್ಲಿ ಕಾಗೋಡು ತಿಮ್ಮಪ್ಪ ಅವರ ಮನೆಗೆ ಭೇಟಿ ನೀಡಿ, ಆಹ್ವಾನ ನೀಡಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಅಲ್ಲಮ ಪ್ರಭು ಪ್ರಶಸ್ತಿ ಪ್ರದಾನ, ಕಾರ್ಯಕ್ರಮದಲ್ಲಿ ಮಿನಿಸ್ಟರ್ ಹೇಳಿದ್ದೇನು?
Doctorate






