ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 18 DECEMBER 2023
SAGARA : ಜೋಗ ಕಾರ್ಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಎರಡು ದಿನದಲ್ಲಿ ಎರಡು ಮಂಗಗಳು ಸಾವನ್ನಪ್ಪಿದ್ದು ಸ್ಥಳೀಯರು ಆತಂಕಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಂಗಗಳ ಮರಣೋತ್ತರ ಪರೀಕ್ಷೆ ನಡೆಸಿದರು.
ಜೋಗದ ವರ್ಕ್‌ಮನ್ ಬ್ಲಾಕ್ ಪ್ರದೇಶದಲ್ಲಿ ಒಂದು ಮಂಗ ಸಾವನ್ನಪ್ಪಿದೆ. ಜೋಗದ ರೆಡ್ಡಿ ಬ್ಲಾಕ್ ಪ್ರದೇಶದಲ್ಲಿ ಮತ್ತೊಂದು ಮಂಗ ಮೃತಪಟ್ಟಿದೆ. ವಿಷಯ ತಿಳಿದು ಆರೋಗ್ಯ ಇಲಾಖೆ, ಅರಣ್ಯ ಇಲಾಖೆ, ಪಟ್ಟಣ ಪಂಚಾಯಿತಿ ಹಾಗೂ ಪಶು ಇಲಾಖೆ ಅಧಿಕಾರಿಗಳು ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನಡೆಸಿದರು. ಭಾರಂಗಿ ಹೋಬಳಿ ಈ ಮೊದಲು ಕೆಎಫ್‌ಡಿ (ಮಂಗನ ಕಾಯಿಲೆ) ವ್ಯಾಪ್ತಿಯಾಗಿತ್ತು. ಈ ಹಿನ್ನೆಲೆ ಮಂಗಗಳ ಸಾವು ಸ್ಥಳೀಯರಲ್ಲಿ ಚಿಂತೆಗೀಡು ಮಾಡಿದೆ.
ಇದನ್ನೂ ಓದಿ – ಸಿಗಂದೂರು ಸೇತುವೆ, ರೈಲ್ವೆ ಯೋಜನೆ, ವಿಮಾನ ನಿಲ್ದಾಣ ಬಗ್ಗೆ ಸಂಸದ ರಾಘವೇಂದ್ರ 5 ಪ್ರಮುಖ ವಿಷಯ ಪ್ರಸ್ತಾಪ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422