SHIVAMOGGA LIVE NEWS | 18 NOVEMBER 2022
SAGARA | ಅಡಕೆ ತೋಟ ಒಂದರಲ್ಲಿ ಕೊಳತೆ ಸ್ಥಿತಿಯಲ್ಲಿ ಎರಡು ಮಂಗಗಳ ಮೃತದೇಹ ಪತ್ತೆಯಾಗಿದೆ. ವಿಚಾರ ತಿಳಿದು ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಸ್ಥಳೀಯರಿಗೆ ಸೂಚಿಸಲಾಗಿದೆ. two monkey death
ಸಾಗರ ತಾಲೂಕು ತಾಳಗುಪ್ಪದ ಬೆಳ್ಳಣ್ಣೆ ಹಕ್ರೆ ಪಾಲಿನಲ್ಲಿ ಅಡಕೆ ತೋಟದಲ್ಲಿ ಮಂಗಗಳ ಮೃತದೇಹ ಪತ್ತೆಯಾಗಿದೆ.
two monkey death
ವಿಚಾರ ತಿಳಿದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕಾವ್ಯಶ್ರೀ, ಪಶುವೈದ್ಯೆ ಶಮಾ, ಕ್ಯಾಸನೂರು ಅರಣ್ಯ ಕಾಯಿಲೆ ಕಚೇರಿಯ ಗಿರೀಶ್, ಅರಣ್ಯ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಕೋರ್ಟ್ ಹಳೆ ಕಟ್ಟಡದ ಬಾಗಿಲಿನ ಬೀಗ ಮುರಿದು, ಗುಜರಿ ವಸ್ತು ದಾಸ್ತಾನು, ಕೇಸ್ ದಾಖಲು
ಮಂಗಗಳ ಮೃತದೇಹ ಪತ್ತೆಯಾದ ಸ್ಥಳದ ಸುತ್ತಲು ಮೆಲಾಥಿನ್ ಪುಡಿ ಉದರಿಸಿ, ಮಂಗಗಳ ಶವವನ್ನು ಸುಡಲಾಯಿತು. ಮಂಗಗಳು ಪರಸ್ಪರ ಕಚ್ಚಾಡಿಕೊಂಡು ಮೃತಪಟ್ಟಿರುವ ಕುರಿತು ಶಂಕೆ ಇದೆ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಸುತ್ತಮುತ್ತಲ ಹಳ್ಳಿಗಳಲ್ಲಿ ಡಿಎಂಪಿ ಎಣ್ಣೆ ವಿತರಣೆ ಮಾಡಲಾಗಿದೆ. ಕಾಡಿಗೆ ತೆರಳುವ ಮುನ್ನ ಡಿಎಂಪಿ ಎಣ್ಣೆ ಹಚ್ಚಿಕೊಂಡು ಹೋಗಬೇಕು ಎಂದು ಸೂಚಿಸಲಾಗಿದೆ. two monkey death
ಸಮೀಪದ ಮನೆಗಳಲ್ಲಿ ಯಾರಿಗಾದರು ಜ್ವರ ಬಂದಿರುವ ಕುರಿತು ಸರ್ವೆ ಸಡೆಸಲು ನಿರ್ಧರಿಸಲಾಗಿದೆ. ಇನ್ನು, ಜಾನುವಾರುಗಳ ಮೇಲಿರುವ ಉಣಗನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.