ಸಾಗರ : ಅಸಮರ್ಪಕ ವಿದ್ಯುತ್ (Power) ಪೂರೈಕೆ ಖಂಡಿಸಿ ವಿದ್ಯುತ್ ಬಳಕೆದಾರರ ಹಿತರಕ್ಷಣಾ ಸಮಿತಿಯ ವತಿಯಿಂದ ಮೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ನಗರದ 13 ಸಾವಿರ ಮನೆಗಳಿಗೆ ಕುಡಿಯುವ ನೀರು ಪೂರೈಸುವ ಯೋಜನೆಯನ್ನು ಮೆಸ್ಕಾಂ, ಆವಿನಹಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಾಂತರ ವಿದ್ಯುತ್ ಮಾರ್ಗದ ಮೂಲಕ ಅನುಷ್ಠಾನ ಗೊಳಿಸಲು ಮುಂದಾಗಿದೆ. ಇದರಿಂದ ಅನಿಯಮಿತ ಲೋಡ್ ಶೆಡ್ಡಿಂಗ್ ಉಂಟಾಗುತ್ತಿದೆ. ಆವಿನಹಳ್ಳಿ ಹೋಬಳಿಯ ಗ್ರಾಮೀಣ ವಿದ್ಯುತ್ ಬಳಕೆದಾರರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು.
ಆವಿನಹಳ್ಳಿ ಹೋಬಳಿಯ ಗ್ರಾಮಾಂತರ ಪ್ರದೇಶದ ಜನರಿಗೆ ಗುಣಮಟ್ಟದ ವಿದ್ಯುತ್ (Power) ಪೂರೈಕೆಗಾಗಿ ಗಿಣಿವಾರದಲ್ಲಿ 33 ಕೆ.ವಿ. ವಿದ್ಯುತ್ ಗ್ರಿಡ್ ಸ್ಥಾಪಿಸಬೇಕು. ಹರಿದ್ರಾವತಿಯಲ್ಲೂ ಇದೇ ಮಾದರಿಯ ಗ್ರಿಡ್ ಸ್ಥಾಪಿಸುವ ಮೂಲಕ ಬಟ್ಟೆಮಲ್ಲಪ್ಪ, ಹೆಗ್ಗೋಡು ಹಾಗೂ ಸುತ್ತಲಿನ ಗ್ರಾಮಗಳ ವಿದ್ಯುತ್ ಗ್ರಾಹಕರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಸಮಿತಿಯ ಎಸ್.ವಿ.ಹಿತಕರ ಜೈನ್, ಕೆ.ಎನ್. ವೆಂಕಟಗಿರಿ, ತೀ.ನ. ಶ್ರೀನಿವಾಸ್, ಸುಂದರ್ ಸಿಂಗ್, ವಿಜಯೇಂದ್ರ ಶ್ಯಾನಭಾಗ್, ಮಂಜುನಾಥ್ ಇದ್ದರು.

ಇದನ್ನೂ ಓದಿ » ಕಾರಿನಲ್ಲಿ ಬಂದು ಡಿವೈಡರ್ ಮೇಲಿದ್ದ ಟ್ರಾಫಿಕ್ ಪೊಲೀಸ್ ರಿಫ್ಲೆಕ್ಟರ್ ಕಟೌಟ್ ಕದ್ದೊಯ್ದ ದುಷ್ಕರ್ಮಿಗಳು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200