ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 5 JUNE 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SAGARA : ಶರಾವತಿ ಹಿನ್ನೀರಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಆದ್ದರಿಂದ ಜೂ.5ರಿಂದ ಕಳಸವಳ್ಳಿ – ಅಂಬಾರಗೋಡ್ಲು ಲಾಂಚ್‌ನಲ್ಲಿ (Sigandur Launch) ವಾಹನ ಸಾಗಾಟ ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಲಾಂಚ್‌ನಲ್ಲಿ ವಾಹನ ಸಾಗಾಟ ಸ್ಥಗಿತಗೊಳಿಸಿರುವುದರಿಂದ ಕರೂರು ಹೋಬಳಿ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಗಾರು ಮಳೆ ಆರಂಭವಾಗಿ ನೀರಿನ ಮಟ್ಟ ಏರಿದಲ್ಲಿ ಮಾತ್ರ ಮತ್ತೆ ವಾಹನ ಸಾಗಾಟ ಪುನಾರಂಭವಾಗಲಿದೆ. ಶರಾವತಿ ನದಿಯ ಹಿನ್ನೀರು ಪ್ರಮಾಣ ತೀವ್ರ ಕುಸಿತ ಕಂಡಿದೆ. ಹಾಗಾಗಿ ಹಸಿರುಮಕ್ಕಿ – ಮುಪ್ಪಾನೆ ಲಾಂಚ್ ಸೇವೆ ನಿಲ್ಲಿಸಲಾಗಿದೆ.
ಇದನ್ನೂ ಓದಿ – ಹಸಿರುಮಕ್ಕಿ ಲಾಂಚ್ ಸೇವೆ ತಾತ್ಕಾಲಿಕ ಸ್ಥಗಿತ, ಸ್ಥಳೀಯರಿಗೆ ಸಂಕಷ್ಟ, ಪ್ರವಾಸಿಗರಿಗೆ ನಿರಾಸೆ, ಕಾರಣವೇನು?
ಕಳೆದ ವರ್ಷ ತೀವ್ರ ಮಳೆ ಕೊರತೆಯಿಂದಾಗಿ ಸಿಗಂದೂರು ಲಾಂಚ್ ಸೇವೆ ಸ್ಥಗಿತವಾಗಿತ್ತು. ಇದರಿಂದ ಜನ ಸಂಚಾರಕ್ಕೆ ತೀವ್ರ ಸಮಸ್ಯೆ ಉಂಟಾಗಿತ್ತು. ಈ ಬಾರಿ ಉತ್ತಮ ಮಳೆಯಾದರೆ ಲಾಂಚ್ ಸೇವೆಗೆ ಅನುಕೂಲ ಆಗಲಿದೆ.