ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 12 JULY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SAGARA : ಅರೆಹದ ವೃತ್ತದಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ (Village Accountant) ಕರ್ತವ್ಯ ನಿರ್ವಹಿಸುತ್ತಿರುವ ವಿಮಲಾ ಅವರು ಗುರುವಾರ ಮಧ್ಯಾಹ್ನ ನಗರದ ತಹಸೀಲ್ದಾರ್ ಕಚೇರಿಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಮಾತ್ರೆ ಸೇವಿಸಿ ಅಸ್ವಸ್ಥರಾಗಿದ್ದ ಅವರಿಗೆ ಸ್ಥಳೀಯ ಉಪವಿಭಾಗೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪೇಟೆ ಠಾಣೆ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ, ವಿಚಾರಣೆ ನಡೆಸಿದರು.
ವಿಮಲಾ ಅವರ ಬಳಿ ಸಿಕ್ಕಿರುವ ಚೀಟಿಯಲ್ಲಿ ಆರೋಗ್ಯದ ಸಮಸ್ಯೆಯಿದ್ದರೂ ತಹಸೀಲ್ದಾರರು ದೂರದ ಊರಿನಲ್ಲಿ ಕೆಲಸಕ್ಕೆ ಹಾಕಿದ್ದಾರೆ. ಬದಲಾಯಿಸಿಕೊಡಲು ಒಪ್ಪುತ್ತಿಲ್ಲ. ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿರುವುದು ಗೊತ್ತಾಗಿದೆ.
ವರ್ಗಾವಣೆಯಿಂದ ಮನನೊಂದಿದ್ದರು
ತಾಲೂಕಿನ ತ್ಯಾಗರ್ತಿ ಮೂಲದ ವಿಮಲಾ ಅವರು ಕಳೆದ ಮೂರ್ನಾಲ್ಕು ವರ್ಷದಿಂದ ಅರೆಹದ ವೃತ್ತದಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜತೆಯಲ್ಲಿ ಮರತ್ತೂರು ಗ್ರಾಮ ಲೆಕ್ಕಾಧಿಕಾರಿಯಾಗಿಯೂ ಕೆಲಸ ಮಾಡುವಂತೆ ತಹಸಿಲ್ದಾರರು ಅವರಿಗೆ ಸೂಚಿಸಿದ್ದರು. ಆದರೆ ಚುನಾವಣೆ ಸಂದರ್ಭ ಆರೋಗ್ಯದ ಸಮಸ್ಯೆಯಿಂದಾಗಿ ರಜೆ ಹಾಕಿದ್ದು, ಬಳಿಕ ಅವರನ್ನು 150 ದಿನಗಳ ಕಾಲ ಬರೂರು ವೃತ್ತಕ್ಕೆ ವರ್ಗಾಯಿಸಲಾಗಿತ್ತು. ಆರೋಗ್ಯ ಸುಧಾರಿಸಿದ ಬಳಿಕ ಮೊದಲಿನ ಸ್ಥಾನಕ್ಕೆ ಕರ್ತವ್ಯಕ್ಕೆ ಹಾಜರಾಗುವಂತೆ ತಹಸೀಲ್ದಾರರು ಸೂಚಿಸಿದ್ದರು ಎಂದು ಕಚೇರಿ ಸಿಬ್ಬಂದಿ ತಿಳಿಸಿದ್ದಾರೆ.
ಡೆತ್ ನೋಟ್ ಲಭ್ಯ
“ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ತಮಗೆ, ಮನೆಗೆ ಹತ್ತಿರವಿರುವ ಬರೂರು ವೃತ್ತಕ್ಕೆ ವರ್ಗಾಯಿಸುವಂತೆ ವಿನಂತಿಸಿಕೊಂಡಿದ್ದರೂ ಪ್ರಯೋಜನವಾಗಿಲ್ಲ. ಅರೆಹದ ಜತೆಯಲ್ಲಿ ಮರತ್ತೂರು ವೃತ್ತವನ್ನೂ ನಿರ್ವಹಿಸುವಂತೆ ನಿರಂತರ ಒತ್ತಡ ಹೇರುತ್ತಿದ್ದಾರೆ. ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದು, ರಜೆ ಕೊಡುವಂತೆ ಮನವಿ ಮಾಡಿಕೊಂಡಿದರೂ, ಉಪ ತಹಸೀಲ್ದಾರ್ ಮೂಲಕ ನೋಟಿಸ್ ಕೊಡಿಸಿದ್ದಾರೆ. ಇದಕ್ಕಾಗಿ ಮನನೊಂದು ಆತ್ಮಹತ್ಯೆಗೆ ಮುಂದಾಗಿರುವೆ,” ಎಂದು ಅವರು ಬರೆದಿಟ್ಟಿರುವ ಪತ್ರ ಲಭಿಸಿದೆ.
ಇದನ್ನೂ ಓದಿ – ಶಿವಮೊಗ್ಗ – ಚೆನ್ನೈ ರೈಲಿನ ವೇಳಾಪಟ್ಟಿ ಪ್ರಕಟ, ಎಲ್ಲೆಲ್ಲಿ ಸ್ಟಾಪ್ ಇರುತ್ತೆ? ಎಷ್ಟು ಬೋಗಿಗಳಿರುತ್ತವೆ?