ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
SAGARA, 6 AUGUST 2024 : ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ (Bus) ಬೆಂಕಿ ಕಾಣಿಸಿಕೊಂಡಿದೆ. ಕೂಡಲೆ ಬಸ್ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಸಾಗರ ಪಟ್ಟಣದ ಜೋಗ ರಸ್ತೆಯ ಕೆಎಸ್‌ಆರ್‌ಟಿಸಿ ಡಿಪೋ ಸಮೀಪ ಘಟನೆ ಸಂಭವಿಸಿದೆ. ಭಟ್ಕಳದಿಂದ ಸಾಗರ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ಸಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಚಾಲಕ ಕೂಡಲೆ ಬಸ್ಸನ್ನು ನಿಲ್ಲಿಸಿದ್ದು, ಎಲ್ಲಾ 12 ಪ್ರಯಾಣಿಕರು ಬಸ್ಸಿನಿಂದ ಕೆಳಗೆಳಿದಿದ್ದಾರೆ.

ಬಸ್‌ನ ಬಹು ಭಾಗ ಹೊತ್ತಿ ಉರಿದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.
ಇದನ್ನೂ ಓದಿ ⇓
ಒಂಟಿ ಮಹಿಳೆ ಕೊಲೆ ಕೇಸ್, ಸಂಬಂಧಿ ಅರೆಸ್ಟ್, ಹತ್ಯೆಗೆ ಕಾರಣವೇನು?

