SHIVAMOGGA LIVE | 30 JULY 2023
SAGARA : ಗಾಂಧಿನಗರದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಟ್ಟಡ, ಕುಡಿಯುವ ನೀರು ತಪಾಸಣಾ (Testing Unit) ಘಟಕವನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಲೋಕಾರ್ಪಣೆ ಮಾಡಿದರು. 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಟ್ಟಡವು ಸಾಗರ, ಸೊರಬ ಮತ್ತು ಶಿಕಾರಿಪುರ ವ್ಯಾಪ್ತಿಗೆ ಒಳಪಡಲಿದೆ.
ಬಳಿಕ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ ಮೂರು ಪ್ರಮುಖಾಂಶಗಳನ್ನು ಪ್ರಸ್ತಾಪಿಸಿದರು.
ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಸರ್ಕಾರದ ಸಂಕಲ್ಪ. ಈ ಘಟಕದಲ್ಲಿ ಮಳೆಗಾಲಕ್ಕು ಮೊದಲು ಮತ್ತು ಮಳೆಗಾಲದ ಬಳಿಕ ನೀರಿನ ಪರೀಕ್ಷೆ ನಡೆಸಲಾಗುತ್ತದೆ. 16 ಮಾನದಂಡದಲ್ಲಿ ನೀರನ್ನು ಪರೀಕ್ಷಿಸಿ ವರದಿ ನೀಡಲಾಗುತ್ತದೆ.
ಮನೆ ಮನೆಗೆ ಗಂಗೆ ಯೋಜನೆಯಲ್ಲಿ ಸಾಗರ ತಾಲೂಕಿನ 46,500 ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸುವ ಗುರಿ ಇದೆ. ಈತನಕ 6,700 ಮನೆಗಳಿಗೆ ಸಂಪರ್ಕ ಕಲ್ಪಿಸಲಾಗಿದೆ. ಉಳಿದ ಮನೆಗಳಿಗೆ ಸಂಪರ್ಕ ಕಲ್ಪಿಸುವ ಕೆಲಸ ಪ್ರಗತಿಯಲ್ಲಿದೆ.
ಶರಾವತಿ ಹಿನ್ನೀರು ಭಾಗದಿಂದ ಆವಿನಹಳ್ಳಿ ಮತ್ತು ಕಸಬಾ ಹೋಬಳಿಯ 13 ಗ್ರಾಮ ಪಂಚಾಯಿತಿಗಳಿಗೆ ಕುಡಿಯುವ ನೀರು ಪೂರೈಸಲಾಗುತ್ತದೆ. 100 ಕೋಟಿ ರೂ. ವೆಚ್ಚದ ಯೋಜನೆ ಪ್ರಗತಿಯಲ್ಲಿದೆ. ಭವಿಷ್ಯದಲ್ಲಿ ಎಲ್ಲ ಗ್ರಾಮಗಳಿಗು ಶುದ್ಧ ಕುಡಿಯುವ ನೀರು ಪೂರೈಕೆಯಾಗಲಿದೆ.
ಇದನ್ನೂ ಓದಿ – ಕೊಡಚಾದ್ರಿ ಪ್ರವಾಸಿಗರಿಗೆ ಶಾಕ್ ನೀಡಿದ ವನ್ಯಜೀವಿ ವಿಭಾಗ, ಇವತ್ತಿನಿಂದ ಪ್ರವೇಶ ನಿಷೇಧ
ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಬಲರಾಮ ದುಬೆ, ಅಭಿಯಂತರ ಗುರುಕೃಷ್ಣ ಶೆಣೈ, ಚೇತನರಾಜ್ ಕಣ್ಣೂರು, ಸೋಮಶೇಖರ ಲ್ಯಾವಿಗೆರೆ ಸೇರಿದಂತೆ ಹಲವರು ಈ ಸಂದರ್ಭ ಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200