ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಕಾಡು ಹಂದಿಗಳ ಹಾವಳಿಗೆ ಅಡಿಕೆ ಸಸಿ, ಬಾಳೆ ಗಿಡಗಳು ನಾಶವಾಗಿವೆ. ಕಟ್ಟಿನಕಾರು ಗ್ರಾಮದ ಹೆಮ್ಮಡೆ ಬೀರನಾಯ್ಕ ಎಂಬುವವರ ಅಡಿಕೆ ತೋಟಕ್ಕೆ ನುಗಿದ ಕಾಡು ಹಂದಿಗಳು (Pig) ಅಡಿಕೆ ಸಸಿಗಳಿಗೆ ಹಾನಿ ಮಾಡಿವೆ. ಫಸಲು ನೀಡಬೇಕಿದ್ದ ಸಸಿಗಳು ಹಾಳಾಗಿದ್ದು ರೈತರಿಗೆ ಸಮಸ್ಯೆಯಾಗಿದೆ.
ಸಾಗರ ತಾಲೂಕಿನ ಚನ್ನಗೊಂಡ ಗ್ರಾಮದಲ್ಲಿ ಕಾಡು ಹಂದಿಗಳ ಹಾವಳಿ ಹೆಚ್ಚಾಗಿದೆ. ಕಳೆದೆರಡು ವಾರದಲ್ಲಿ ಕಾಡು ಹಂದಿಗಳಿಂದ ಗ್ರಾಮದಲ್ಲಿ 80ಕ್ಕೂ ಹೆಚ್ಚು ಅಡಿಕೆ ಸಸಿಗಳು ನಾಶವಾಗಿವೆ.

ಕಾಡು ಪ್ರಾಣಿಗಳಿಂದ ಬೆಳೆ ನಷ್ಟವಾಗುತ್ತಿರುವ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಯಾರೂ ಕ್ರಮ ಕೈಗೊಳ್ಳುತ್ತಿಲ್ಲ. ಬೆಳೆ ಹಾನಿಗೆ ಅರಣ್ಯ ಇಲಾಖೆ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.
ಇದನ್ನೂ ಓದಿ » ಸಿಗಂದೂರು ಸೇತುವೆ, ಮೊದಲ ಲೋಡ್ ಟೆಸ್ಟ್ ಪಾಸ್, ಏನಿದು ಪರೀಕ್ಷೆ? ಹೇಗೆ ನಡೆಯುತ್ತೆ?
LATEST NEWS
- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

About The Editor
ನಿತಿನ್ ಆರ್.ಕೈದೊಟ್ಲು
















