ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SAGARA NEWS | 09 JANUARY 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ನಮ್ಮೂರಿಗೆ ಮದ್ಯದ ಅಂಗಡಿ ಬೇಡ ಅಂತಾ ಆಗ್ರಹಿಸಿ, ಮಹಿಳೆಯರು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.
ಲಿಂಗದಹಳ್ಳಿ ಪಡವಗೋಡು ನಡುವೆ ಇರುವ ಬೆಳ್ಳಿಕೊಪ್ಪದಲ್ಲಿ ಎಂಎಸ್‍ಐಎಲ್ ಮದ್ಯದ ಅಂಗಡಿ ತೆರೆಯಲಾಗಿದೆ. ಇದನ್ನು ವಿರೋಧಿಸಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ರಸ್ತೆ ತಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಮಾತಿನ ಚಕಮಕಿ, ನೂಕಾಟ, ತಳ್ಳಾಟ
ರಸ್ತೆ ತಡೆ ನಡೆಸುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸಾಗರ ಪೊಲೀಸರು, ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು. ರಸ್ತೆ ತಡೆ ನಡೆಸದಂತೆ ತಿಳಿಸಿದರು. ಕೊನೆಗೆ ಪ್ರತಿಭಟನಾಕಾರರನ್ನು ಒತ್ತಾಯಪೂರ್ವಕವಾಗಿ ರಸ್ತೆಯಿಂದ ಪಕ್ಕಕ್ಕೆ ಸರಿಸಲು ಯತ್ನಿಸಿದರು. ಈ ವೇಳೆ ಮಾತಿನ ಚಕಮಕಿ ನಡೆಯಿತು.
ಸುಳ್ಳಾಯ್ತು ಭರವಸೆ, ಮಹಿಳೆಯರ ಆಕ್ರೋಶ
ಎಂಎಸ್‍ಐಎಲ್ ಮದ್ಯದ ಅಂಗಡಿ ತೆರೆಯುವುದಕ್ಕೆ ಬೆಳ್ಳಿಕೊಪ್ಪ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರು. ಗ್ರಾಮ ಪಂಚಾಯಿತಿ ಚುನಾವಣೆ ಬಹಿಷ್ಕರಿಸುವ ಎಚ್ಚರಿಕೆಯನ್ನು ನೀಡಿದ್ದರು. ಈ ವೇಳೆ ಗ್ರಾಮಕ್ಕೆ ಭೇಟಿ ನೀಡಿದ್ದ ಉಪ ವಿಭಾಗಾಧಿಕಾರಿ ಗ್ರಾಮಸ್ಥರ ಆಗ್ರಹಗಳನ್ನು ಈಡೇರಿಸುವ ಭರವಸೆ ನೀಡಿದ್ದರು. ಆದರೆ ಶುಕ್ರವಾರ ಮದ್ಯದ ಅಂಗಡಿ ಉದ್ಘಾಟನೆಯಾಗಿದೆ. ಇದರಿಂದ ಆಕ್ರೋಶಗೊಂಡ ಮಹಿಳೆಯರು ಇವತ್ತು ಪ್ರತಿಭಟನೆ ನಡೆಸಿದರು.
ದಲಿತ ಸಂಘರ್ಷ ಸಮಿತಿಯ ಮುಖಂಡ ಪರಮೇಶ್ವರ ದೂಗೂರು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]