ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 DECEMBER 2020
ಸಾಗರ ತಾಲೂಕು ತಾಳಗುಪ್ಪ ಬಸ್ ನಿಲ್ದಾಣದ ಬಳಿ ಮಹಿಳೆಯೊಬ್ಬರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಹಸಿರು ಶಾಲು, ಪ್ಲೇ ಕಾರ್ಡ್ ಹಿಡಿದು, ಅರ್ಧ ದಿನ ರಸ್ತೆಯಲ್ಲೇ ನಿಂತು ಜನ ಜಾಗೃತಿ ಮೂಡಿಸಿ, ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.
ಯಾರಿದು ಮಹಿಳೆ?
ತಾಳಗುಪ್ಪದ ನವಿಲುಮನೆ ಗ್ರಾಮದ ಪೂರ್ಣಿಮಾ ಎಂಬುವವರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಶನಿವಾರ ಮಧ್ಯಾಹ್ನದಿಂದ ಸಂಜೆವರೆಗೆ ಪ್ಲೇ ಕಾರ್ಡ್ ಹಿಡಿದು ನಿಂತು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಗೆ ಕಾರಣವೇನು?
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೃಷಿ ಮಸೂದೆ, ಸಾರ್ವಜನಿಕ ಸ್ವತ್ತುಗಳನ್ನು ಬಂಡವಾಳಶಾಹಿಗಳ ಕೈಗೆ ಒಪ್ಪಿಸುತ್ತಿರುವುದನ್ನು ವಿರೋಧಿಸಿ, ಪಂಜಾಬ್, ಹರಿಯಾಣದ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಪೂರ್ಣಿಮಾ ಅವರು ಪ್ರತಿಭಟನೆ ನಡೆಸಿದರು. ಪ್ರತಿ ವಾರ ತಾಳಗುಪ್ಪ ಸಂತೆಯಲ್ಲಿ ಹೀಗೆ ಏಕಾಂಗಿಯಾಗಿ ಪ್ರತಿಭಟನೆ ನಡೆಸುವುದಾಗಿ ಪೂರ್ಣಿಮಾ ತಿಳಿಸಿದ್ದಾರೆ.
ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಖಂಡಿಸಿ ಪೂರ್ಣಿಮಾ ಅವರು ತಾಳಗುಪ್ಪದಿಂದ ಸಾಗರದವರೆಗೆ ಪಾದಯಾತ್ರೆ ಮಾಡಿ, ಮನವಿ ಸಲ್ಲಿಸಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422