ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SAGARA NEWS, 8 OCTOBER 2024 : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ರಾಘವೇಂದ್ರ ಅವರು ಸಿಗಂದೂರು ಸೇತುವೆ (Bridge) ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದರು. ಇದೇ ವೇಳೆ ಸಿಗಂದೂರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಸಿಗಂದೂರು ದೇಗುಲದಲ್ಲಿ ಪೂಜೆ
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದ ರಾಘವೇಂದ್ರ ಅವರು ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭ ದೇವಸ್ಥಾನದ ಧರ್ಮದರ್ಶಿ ರಾಮಪ್ಪ ಸೇರಿ ಹಲವರು ಇದ್ದರು.
ಸೇತುವೆ ಉದ್ಘಾಟನೆಗೆ ಮೋದಿ
ಸಿಗಂದೂರು ಸೇತುವೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಲಾಯಿತು. ಈ ಸಂದರ್ಭ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ 2025ರ ಏಪ್ರಿಲ್ ತಿಂಗಳಲ್ಲಿ ಸಿಗಂದೂರು ಸೇತುವೆ ಉದ್ಘಾಟನೆ ಆಗಲಿದೆ. ಇದು ದೇಶದ ಎರಡನೆ ಅತಿ ಉದ್ದದ ಸೇತುವೆಯಾಗಿದೆ. ಇದರ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಎಂಎಡಿಬಿ ಮಾಜಿ ಅಧ್ಯಕ್ಷ ಗುರುಮೂರ್ತಿ, ಪ್ರಮುಖರಾದ ಎಸ್.ದತ್ತಾತ್ರಿ, ಮಲ್ಲಿಕಾರ್ಜುನ ಹಕ್ರೆ, ಪ್ರಸನ್ನ ಕೆರೆಕೈ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆ, ತಾಪಮಾನ ತುಸು ಏರಿಕೆ, ಇವತ್ತು ಎಲ್ಲೆಲ್ಲಿ ಮಳೆಯಾಗುತ್ತೆ?
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 27 ಮಾರ್ಚ್ 2026

- ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್ ಜಾಮ್

- ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

About The Editor
ನಿತಿನ್ ಆರ್.ಕೈದೊಟ್ಲು















