ಶಿವಮೊಗ್ಗ ಲೈವ್.ಕಾಂ | ಸಾಗರ
ಸಾಗರ ಪಟ್ಟಣದ ಎಸ್.ಎನ್. ನಗರದ ಸಂತೆ ಮಾರುಕಟ್ಟೆ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತನನ್ನು ಹಫೀಜ್ ಉರ್ ರೆಹಮಾನ್ (27) ಎಂದು ಗುರುತಿಸಲಾಗಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಈತನಿಂದ ಸುಮಾರು ₹20,000 ಮೌಲ್ಯದ 6.77 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
