ಶಿವಮೊಗ್ಗ ಲೈವ್.ಕಾಂ | SAGARA NEWS | 26 ಆಗಸ್ಟ್ 2020
ಖಿನ್ನತೆಗೆ ಒಳಗಾಗಿದ್ದ ಯುವಕನೊಬ್ಬ ಬೆಂಗಳೂರಿನಿಂದ ಜೋಗ ಜಲಪಾತಕ್ಕೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರ ಸಮಯ ಪ್ರಜ್ಞೆಯಿಂದ ಯುವಕ ಬಚಾವಾಗಿದ್ದಾನೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಯಾರಿದು ಯುವಕ?
ಬೆಂಗಳೂರಿನಿಂದ ಜೋಗ ಜಲಪಾತಕ್ಕೆ ಆಗಮಿಸಿದ್ದ ಚೇತನ್ ಎಂಬ ಯುವಕ, ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬ್ರಿಟಿಷ್ ಬಂಗಲೆ ಬಳಿ ರಾಣಿ ಫಾಲ್ಸ್ ಕಡೆಯಿಂದ ಕೆಳಗೆ ಧುಮುಕಲು ಪ್ರಯತ್ನಿಸಿದ್ದಾನೆ. ಈತ ಆತ್ಮಹತ್ಯೆಗೆ ಪ್ರಯತ್ನಿಸುತ್ತಿರುವ ಕುರಿತು ಸ್ಥಳೀಯರು ಮಾಹಿತಿ ನೀಡಿದ್ದು, ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಯುವಕನ ಮನವೊಲಿಸುವಲ್ಲಿ ಸಫಲರಾಗಿದ್ದಾರೆ.
ಆತ್ಮಹತ್ಯೆಗೆ ಮುಂದಾಗಿದ್ದೇಕೆ?
ಪದವೀಧರನಾಗಿರುವ ಚೇತನ್, ಸಂಸ್ಥೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ. ಖಾಸಗಿ ವಿಚಾರವೊಂದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾಗಿ ತಿಳಿಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೂರು ಗಂಟೆ ಕೂತಿದ್ದ
ರಾಣಿ ಫಾಲ್ಸ್ ಕಡೆಯಿಂದ ಕೆಳಗೆ ಜಿಗಿಯಲು ಬಂದ ಚೇತನ್, ಬಳಿಕ ಫಾಲ್ಸ್‍ನ ತುದಿಯಲ್ಲೇ ಕುಳಿತಿದ್ದಾನೆ. ಸತತ ಮೂರು ಗಂಟೆಯ ಬಳಿಕ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಮನವೊಲಿಸಿದ್ದಾರೆ. ಪೊಲೀಸರು ವಿಚಾರಣೆ ನಡೆಸಿದಾಗ, ಆತ್ಮಹತ್ಯೆಗೆ ಪ್ರಯತ್ನಿಸಿದ್ದೇಕೆ ಎಂದು ತಿಳಿಸಿದ್ದಾನೆ. ಅಲ್ಲದೆ ರಾಣಿ ಫಾಲ್ಸ್ ಮೇಲೆ ಕುಳಿತಿದ್ದ ತನಗೆ ಜ್ಞಾನೋದಯವಾಗಿದೆ. ಹಾಗಾಗಿ ಫಾಲ್ಸ್‍ಗೆ ಜಿಗಿಯಲಿಲ್ಲ ಎಂದು ತಿಳಿಸಿದ್ದಾನೆ.
ಚೇತನ್‍ನನ್ನು ಈಗ ಪೊಲಿಸರು ವಶಕ್ಕೆ ಪಡೆದಿದ್ದು. ಅತನನ್ನು ಮನೆಯವರನ್ನು ಸಂಪರ್ಕಿಸಿ, ಆತನನ್ನು ಮನೆಗೆ ಕಳುಹಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]